ಯಾದಗಿರಿ | ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ದಸಂಸ ವಿರೋಧ

Date:

ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ರಾಜ್ಯ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿ ಶುಕ್ರವಾರ ತಹಶಿಲ್ದಾರರು ಶಹಾಪುರ ರವರ ಮುಖಾಂತರ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸಚಿವರು ಪ್ರಸ್ತುತ ನಿರ್ಮಾಣ ಮಾಡುತ್ತಿರುವ ಪ್ರಜಾಸೌಧ ಕಟ್ಟಡದ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕು ಹಾಗೂ ಹಳೆಯ ತಹಸೀಲ್ದಾರ ಕಾರ್ಯಾಲಯದ ಜಾಗದಲ್ಲೇ ಪ್ರಜಾಸೌಧ ಕಟ್ಟಡ ನಿರ್ಮಿಸಿ ಸಾರ್ವಜನಿಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಂಡುವಂತೆ ಒತ್ತಾಯಿಸಿದರು.

ಮನವಿ ಸಲ್ಲಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಘಟಕ ಅಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ ಮಾತನಾಡಿ, ‘ಸಚಿವರ ಅಭಿವೃದ್ಧಿ ಕಾರ್ಯಗಳಿಗೆ ನಾವು ವಿರೋಧಿಗಳಲ್ಲ. ಆದರೆ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡುತ್ತಿರುವುದಕ್ಕೆ ನಮ್ಮ ಸ್ಪಷ್ಟ ವಿರೋಧವಿದೆ. ಶಿಕ್ಷಣ ಇಲಾಖೆಯ ಜಾಗದಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣವಾದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರು, ‘ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾದರೆ ಶಹಾಪುರ ನಗರದಲ್ಲಿ ತೀವ್ರ ಹೋರಾಟ ಹಾಗೂ ಆಕ್ರೋಶ ಉಂಟಾಗಲಿದೆ” ಎಂದು ಎಚ್ಚರಿಕೆ ನೀಡುವುದರ ಮುಖಾಂತರ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಶರಣಪ್ಪ ಚಲವಾದಿ, ಗೌರವಾಧ್ಯಕ್ಷ ಮರೆಪ್ಪ ಹೊಸಮನಿ, ವಡಿಗೇರ ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಆಯ್ಯಾಳ (ಕೆ), ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ್ ಸುರಪುರಕರ್ ಕೊಂಗಂಡಿ ಸೇರಿದಂತೆ ದಸಂಸದ ಹಲವಾರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...