ಯಾದಗಿರಿ | ಬೆಳೆ ಸಮೀಕ್ಷೆದಾರರ ಕಾಯಮಾತಿ, ಸೇವಾ ಭದ್ರತೆಗೆ ಆಗ್ರಹ: ಕೃಷಿ ಸಚಿವರಿಗೆ ಮನವಿ

Date:

ಕರ್ನಾಟಕ ರಾಜ್ಯದ ಬೆಳೆ ಸಮೀಕ್ಷೆದಾರ(ಪಿಆರ್‌ಗಳು)ರಿಗೆ ಸೇವಾ ಭದ್ರತೆ, ಜೀವವಿಮೆ ಒದಗಿಸುವ ಹಾಗೂ ಕಾಯಮಾತಿಗೆ ಆಗ್ರಹಿಸಿ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

“ಕರ್ನಾಟಕ ರಾಜ್ಯದಲ್ಲಿ ನಾವುಗಳು ಸುಮಾರು 9 ರಿಂದ 10 ವರ್ಷಗಳಿಂದ ಬೆಳೆ ಸಮೀಕ್ಷೆದಾರರಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆ ಸಲ್ಲಿಸುತ್ತಿರುವ ಸಮಯದಲ್ಲಿ ಹಾವು, ಚೇಳು, ಕಾಡುಹಂದಿಗಳು ಹಾಗೂ ತೋಳಗಳ ದಾಳಿಯಿಂದ ಗಾಯಗಳಾಗಿವೆ. ಈ ಹಿಂದೆ ಕೆಲವು ಜಿಲ್ಲೆಗಳಲ್ಲಿ ಹಾವು ಕಚ್ಚಿದ್ದು, ಸಂಬಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಿದ್ದರೂ ಕೂಡಾ ಯಾವುದೇ ರೀತಿಯ ಪರಿಹಾರ ನೀಡಿಲ್ಲ. ಆದರೂ ನಾವು ಜೀವದ ಆಸೆ ಬಿಟ್ಟು ಶ್ರದ್ದೆಯಿಂದ ಸೇವೆ ಮಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಹಲವಾರು ತೊಂದರೆಗಳಿಗೆ ಒಳಗಾಗಿದ್ದೇವೆ” ಎಂದು ಹೇಳಿದರು.

“ಡಿ‌ ಗ್ರೂಪ್‌ ನೌಕರರಾಗಿ ಪರಿಗಣಿಸಬೇಕು. ಗ್ರಾಮದ ಬೆಳೆ ಸಮೀಕ್ಷೆದಾರರನ್ನು ಕೃಷಿ ಇಲಾಖೆ ಡಿ ಗ್ರೂಪ್ ನೌಕರರನ್ನು ಖಾಯಂಗೊಳಿಸಬೇಕು. ಕಡ್ಡಾಯವಾಗಿ ಪ್ರತಿಯೊಬ್ಬ ಪಿಆರ್‌ಗಳಿಗೆ ಡಿಜಿಟಲ್ ಐಡಿ ಕಾರ್ಡ್ ನೀಡಬೇಕು ಹಾಗೂ ಜೀವವಿಮಾ ಸೇವಾ ಸೌಲಭ್ಯವನ್ನು ಒದಗಿಸಿಕೊಡಬೇಕು, ಪ್ರತಿಯೊಬ್ಬ ನೌಕರನನ್ನು ಖಾಯಂಗೊಳಿಸಬೇಕು. ಈ ಬಗ್ಗೆ ನಾವು ಈ ಹಿಂದೆ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಈವರೆಗೆ ಇದರ ಬಗ್ಗೆ ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲ. ದಯವಿಟ್ಟು ಈಗಲಾದರೂ ನಮ್ಮ ಮನವಿಯನ್ನು ಪರಿಗಣಿಸಿ ನೌಕರಿಯನ್ನು ಖಾಯಂಮಾಡಿ ನಮ್ಮಗಳಿಗೆ ಜೀವವಿಮೆ ಮತ್ತು ಇತರೆ ಸೌಲಭ್ಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಕನಿಷ್ಟ ಕೂಲಿ ಜಾರಿಗೆ ಸರ್ಕಾರದ ಶೂನ್ಯ ಸ್ಪಂದನೆ ; ಬೀದಿಗಿಳಿದ ಬೀಡಿ ಕಾರ್ಮಿಕರು

ರಾಜ್ಯ ಉಪಾಧ್ಯಕ್ಷ ಆಂಜನೇಯ ಕಲಾಲ್, ಯಾದಗಿರಿ ಜಿಲ್ಲಾ ಅಧ್ಯಕ್ಷ ಹೊನ್ನಪ್ಪ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಸಜ್ಜನ್ ಸೇರಿದಂತೆ ಬೆಳೆ ಸಮೀಕ್ಷೆದಾರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...