ಯಾದಗಿರಿ | ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ದ ಶಿಸ್ತು ಕ್ರಮಕ್ಕೆ ಆಗ್ರಹ

Date:

ಯಾದಗಿರಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯವೈಖರಿಯ ಹಾಗೂ ಕಾಶಪ್ಪ ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ರಾಹುಲ್ ಕೊಲ್ಲೂರಕರ್ ಮಾತನಾಡಿ, “ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳ ದರ್ಪ ದಿನ ದಿನಕ್ಕೆ ಮಿತಿ ಮಿರುತ್ತಿದೆ, ಸಂಚಾರಿ ಠಾಣೆಯ ಸಿಬ್ಬಂದಿಗಳು ಒಂದೇ ಜಾಗದಲ್ಲಿ ಏಳೆಂಟು ಜನ ಗುಂಪಾಗಿ ನಿಂತು ಹಳ್ಳಿಯಿಂದ ಬರುವ ಜನರಿಂದ ಹಣ ವಸೂಲಿ ಮಾಡುತ್ತಿದ್ದು, ದಂಡ ಕಟ್ಟದಿದ್ದರೆ ಚಾಲಕರಿಂದ 200, 300 ರೂಪಾಯಿ ಕೊಡುವಂತೆ ಡಿಮ್ಯಾಂಡ್ ಮಾಡುತ್ತಾರೆ. ಅದಕ್ಕೆ ಯಾವುದೇ ರಸೀದಿ ಸಹ ನೀಡುವುದಿಲ್ಲʼ ಎಂದು ಆರೋಪಿಸಿದರು.

ʼಯಾದಗಿರಿಯಲ್ಲಿ ಪ್ರತಿ ಮಂಗಳವಾರ ನಡೆಯುವ ಸಂತೆಯಲ್ಲಿ ಗ್ರಾಮೀಣ ಭಾಗದ ಬಡ ರೈತರು, ಕಾರ್ಮಿಕರು, ತರಕಾರಿ, ಇತರೆ ಸಾಮಾಗ್ರಿ ತರುವ ವಾಹನಗಳಿಗೆ ಅಡ್ಡಗಟ್ಟಿ, ಅವರಿಗೆ ಧಮಕಿ ಹಾಕಿ, ವಾಹನಗಳ ದಾಖಲೆಗಳು ಇದ್ದರೂ ಕೂಡಾ ಅವರ ಬಳಿ ಹಣ ವಸೂಲಿ ಮಾಡುತ್ತಿದ್ದು, ನಾಮಕೆ ವಾಸ್ತೆ ಕೆಲವು ವಾಹನಗಳಿಗೆ ದಂಡ ಹಾಕಿ, ರಸೀದಿಗಳು ನೀಡುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಜನರ ವ್ಯಾಪಾರಕ್ಕೆ ಅಡ್ಡಿಯಾಗುತ್ತಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ಬಗ್ಗೆ ಪ್ರಶ್ನಿಸಿದರೆ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ವಾಹನ ಸವಾರರ ಮೇಲೆ ಹಲ್ಲೆ ಮಾಡಿ ಅವರ ಮೊಬೈಲ್ ಕಸಿದುಕೊಳ್ಳುತ್ತಿದ್ದು.ಅನೇಕ ಕಡೆ ಸಿಸಿ ಟಿವಿಗಳಿಲ್ಲ. ಅಪಘಾತದಿಂದ ಮರಣ ಹೊಂದುತ್ತಿದ್ದು, ಕೇವಲ ತೊಂದರೆ ಕೊಡುವ ಕೆಲಸದಲ್ಲಿ ನಿರತರಾಗಿದ್ದಾರೆ. ವಾಹನ ಸವಾರರ ಸುಳ್ಳು ಆರೋಪ ಮಾಡಿ, ಜನರ ಜೀವದ ಜೊತೆ ಆಟವಾಡುತ್ತಿರುವುದು ಖಂಡನೀಯʼ ಎಂದರು.

ಈ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ʼಗೃಹ ಆರೋಗ್ಯʼ ಯೋಜನೆಗೆ ಚಾಲನೆ; ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ : ಸಚಿವ ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ಪ್ರಮುಖರಾದ ಬಂದಪ್ಪ ಕಟ್ಟಿಮನಿ, ಕಾಶಿನಾಥ್ ಕಾಣೆಕಲ್, ಬಿ.ಆಂಜನೇಯ ಭಂಡಾರಿ, ಮೋನಪ್ಪ ಮುನೆಪ್ಪಾನೋರ್, ಸೈದಪ್ಪ ಕೊಲೂರ್, ರಮೇಶ್ ಕ್ಯಾತ್ನಾಳ್, ಮಶಪ್ಪ ಅರಿಕೇರಿ, ರಮೇಶ್ ಗಣಪುರ, ಹಣಮಂತ ಕೊಲ್ಲೂರ್, ಬಾಲು ಹಳ್ಳಿ ಮತ್ತಿತರರು ಉಪ್ಪಸ್ಥಿತರುದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...