ಯಾದಗಿರಿ | ಒತ್ತುವರಿಯಾದ ಸರ್ಕಾರಿ ಖಾರೀಜ್‌ ಭೂಮಿ ದಲಿತ ಸಮುದಾಯಕ್ಕೆ ಮಂಜೂರು ಮಾಡಲು ಆಗ್ರಹ

Date:

ಸುರಪುರ ನಗರದ ಸರ್ಕಾರಿ ಖಾರೀಜ್‌ ಭೂಮಿಯನ್ನು ಮತ್ತೊಮ್ಮೆ ಸರ್ವೆ ಮಾಡಿಸಿ ಒತ್ತುವರಿಯಾಗಿರುವ 2 ಎಕರೆ, 26 ಗುಂಟೆ ಜಾಗವನ್ನು ಪರಿಶಿಷ್ಟ ಜಾತಿಗೆ ಮಂಜೂರು ಮಾಡಿ ಕೊಡಬೇಕು ಎಂದು ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡರು ಕೋರಿದರು

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ʼಸುರಪುರ ನಗರದ ಸರ್ವೆ ನಂ 7/1ರಲ್ಲಿ ಸರ್ಕಾರಿ ಖಾರೀಜ್ ಖಾತಾ ಭೂಮಿಗೆ ಹೊಂದಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸುತ್ತ ಅಭಿವೃದ್ಧಿಪಡಿಸಲು ಒತ್ತುವರಿಯಾದ ಭೂಮಿಯನ್ನು ಜಿಲ್ಲಾಡಳಿತ ಮಂಜೂರು ಮಾಡಿಕೊಡಬೇಕು. ಇದಕ್ಕಾಗಿ ಹಲವರು ವರ್ಷಗಳಿಂದ ಮನವಿ ಪತ್ರಗಳನ್ನು ಸಲ್ಲಿಸಿ, ಹೋರಾಟವೂ ಮಾಡುತ್ತಿದ್ದೇವೆʼ ಎಂದರು.

ʼಈ ಜಾಗ ನೀಡುವಂತೆ ಸಮುದಾಯದ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸಚಿವರಾದ ಡಾ.ಎಚ್‌.ಸಿ. ಮಹಾದೇವಪ್ಪ, ‍ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ. ಜತೆಗೆ ಮನವಿ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು. ಜಾಗ ಮಂಜೂರು ಮಾಡಲು ವಿಳಂಬ ಮಾಡಿದರೆ ಪ್ರತಿಭಟನೆಯ ಮೂಲಕ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ರಾಹುಲ್ ಹುಲಿಮನಿ ಮಾತನಾಡಿ, ʼದಶಕಗಳ ಹಿಂದೆಯೇ ಸರ್ಕಾರದ ನಿಯಮದಂತೆ ಈ ಜಾಗದಲ್ಲಿ ಅಂಬೇಡ್ಕರ್‌ ಅವರ ಹೆಸರಿನ ನಾಮಫಲಕ, ವೃತ್ತವನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಅಂಬೇಡ್ಕರ್ ಜಯಂತಿ, ಮಹಾ ಪರಿನಿರ್ವಾಣ ದಿನವನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆʼ ಎಂದು ಹೇಳಿದರು.

ಈ ಜಾಗವನ್ನು ನಮ್ಮ ಸಮುದಾಯಕ್ಕೆ ಮಂಜೂರು ಮಾಡಿ ಉದ್ಯಾನ, ಸಾಂಸ್ಕೃತಿಕ ಭವನ ಮತ್ತು ಗ್ರಂಥಾಲಯವನ್ನು ನಿರ್ಮಾಣ ಮಾಡಬೇಕು. ದಲಿತರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದನ್ನು ರದ್ದುಗೊಳಿಸಬೇಕು. ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಕಾರು ಡಿಕ್ಕಿ : ಬೈಕ್‌ ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮರೆಪ್ಪ ಚಟ್ಟೇರಕ‌ರ್, ನಾಗಣ್ಣ ಕಲ್ಲದೇವನಹಳ್ಳಿ, ಭೀಮರಾಯ ಸಿಂದಗೇರಿ, ಮಾನಪ್ಪ ಕಟ್ಟಿಮನಿ, ಮಾಳಪ್ಪ ಕಿರದಳ್ಳಿ, ಶರಣು ಎನ್. ನಾಟೇಕರ್, ಮಾನಪ್ಪ ಬಳಬಟ್ಟಿ, ಶಿವಲಿಂಗ ಎಂ.ಫಲವಾರಿ, ನಾಗಣ್ಣ ಬಡಿಗೇರ, ಭೀಮರಾಯ ಹೊಸಮನಿ ಸೇರಿ ಹಲವರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...