ಯಾದಗಿರಿ | ಗುಂಡಳ್ಳಿ ಗ್ರಾಮಕ್ಕೆ ಬಸ್ ಕಲ್ಪಿಸಲು ಒತ್ತಾಯ; ರಾಹೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Date:

ಯಾದಗಿರಿಯ ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮಕ್ಕೆ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಶಹಪೂರ ಸಮಿತಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಗುಂಡಳ್ಳಿ ಗ್ರಾಮದ ನೂರಾರು ವಿದ್ಯಾರ್ಥಿಗಳು ಶಹಾಪುರ ಹಾಗೂ ಯಾದಗಿರಿಗೆ ದಿನನಿತ್ಯ ಶಾಲೆ-ಕಾಲೇಜಿಗೆ ತೆರಳುತ್ತಾರೆ. ಆದರೆ, ಬಸ್‌ ಸೌಕರ್ಯವಿಲ್ಲದೆ ನಿತ್ಯ ಅವರೆಲ್ಲ ಪರದಾಡುವಂತಾಗಿದೆ. ಸಮಯಕ್ಕೆ ಸರಿಯಾಗಿ ಬಸ್‌ ಸಿಗದ ಪರಿಣಾಮ ಹಾಜರಾತಿ ಕೊರತೆ, ತಡವಾಗಿ ಹಾಜರು, ಇವೆಲ್ಲವೂ ವಿದ್ಯಾಭ್ಯಾಸದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ಇದರಿಂದ ಅನೇಕರು ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎಂದು ಎಸ್‌ಎಫ್‌ಐ ಕಾರ್ಯಕರ್ತರು ಆರೋಪಿಸಿದರು.

ಈ ಕುರಿತು ಹಿಂದೆಯೂ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ಸಿಗದ ಕಾರಣ, ವಿದ್ಯಾರ್ಥಿಗಳು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ತಿಳಿದ ಸಾರಿಗೆ ಇಲಾಖೆ ಡಿಟಿಒ ಬಿ ಆರ್ ರೆಡ್ಡಿಯವರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಎರಡು ದಿನಗಳೊಳಗಾಗಿ ಗುಂಡಳ್ಳಿ ಗ್ರಾಮದಲ್ಲಿ ಬಸ್ ನಿಲುಗಡೆ ವ್ಯವಸ್ಥೆ ಮಾಡಿಸುವುದಾಗಿ, ಅಗತ್ಯವಿದ್ದರೆ ಹೊಸ ಬಸ್ಸುಗಳನ್ನೂ ಓಡಿಸುವುದಾಗಿ ಭರವಸೆ ನೀಡಿದರು. ʼನಾನು ನೀಡಿದ ಮಾತು ತಪ್ಪಿದರೆ ಕೆಲಸಕ್ಕೆ ರಾಜೀನಾಮೆ ನೀಡುತ್ತೇನೆʼ ಎಂದು ಅವರು ವಿದ್ಯಾರ್ಥಿಗಳನ್ನು ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ಯಾದಗಿರಿ | ಹಳೆಯ ವೈಷಮ್ಯ ಹಿನ್ನೆಲೆ : ನಗರಸಭೆ ಮಾಜಿ ಅಧ್ಯಕ್ಷೆ ಅಂಜಲಿ ಕಾಂಬಾನೂರರ ಹತ್ಯೆಗೆ ಯತ್ನ

ಇದೇ ವೇಳೆ ರಾಷ್ಟ್ರೀಯ ಹೆದ್ದಾರಿಯಿಂದ ತೆರಳುತ್ತಿದ್ದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರ್ ಅವರ ಕಾರನ್ನು ವಿದ್ಯಾರ್ಥಿಗಳು ತಡೆದು ಸಮಸ್ಯೆಯನ್ನು ವಿವರಿಸಿದರು. ವಿದ್ಯಾರ್ಥಿಗಳ ಮನವಿಯನ್ನು ಆಲಿಸಿದ ಶಾಸಕ, “ನನ್ನ ಗಮನಕ್ಕೆ ಈ ವಿಷಯ ತರುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ” ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ನಂತರ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಎಸ್ಎಫ್‌ಐ ಜಿಲ್ಲಾ ಸಂಚಾಲಕ ಇಮಾಮ್ ಸಾಬ್ ನದಾಫ್, ಗ್ರಾಮ ಘಟಕದ ಮುಖಂಡ ಮಲ್ಕಣ್ಣ, ಮಹೇಶ್, ಮಾಳಿಂಗರಾಯ, ಮಾಳಪ್ಪ, ಮಲ್ಲಿಕಾರ್ಜುನ, ರಾಜಶೇಖರ್, ಸುರೇಶ, ಸಾಯಬಣ್ಣ, ರವಿ, ರೆಡ್ಡಿ ಶರಮುದ್ದಿನ್, ಶಿಲ್ಪಾ, ರೇಖಾ, ಸುನಂದಾ, ಶ್ರೀದೇವಿ ಸೇರಿದಂತೆ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆಯ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...