ಯಾದಗಿರಿ | ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಉಚಿತ ಬೇಸಿಗೆ ಶಿಬಿರ

Date:

‘ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್’ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ ‘ಉಚಿತ ಬೇಸಿಗೆ ಶಿಬಿರ’ ಆರಂಭವಾಗಿದೆ.

ಯಾದಗಿರಿ ಜಿಲ್ಲೆಯ ನಗರದ ಬಸ್ ನಿಲ್ದಾಣದ ಹತ್ತಿರದ ಸ್ವಾಮಿ ಪರಾಂಕುಶ ಮಠದ ಆವರಣದಲ್ಲಿ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಸುರಪುರ ಮತ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಈ ಸಂಸ್ಥೆಯವರು ಶಿಸ್ತು, ಪ್ರಾಮಾಣಿಕತೆಗೆ ಹೆಸರಾಗಿದ್ದು, ಉತ್ತಮವಾದ ಬೋಧಕ ಸಿಬ್ಬಂದಿಯನ್ನು ಈ ಟ್ರಸ್ಟ್‌ನಲ್ಲಿ ನೇಮಕ ಮಾಡಿಕೊಂಡಿದೆ. ಹಾಗಾಗಿ ಸುರಪುರದ ಮಕ್ಕಳು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರಸ್ಟ್‌ನ ಅಧ್ಯಕ್ಷ ಆರ್ ಸಿ ನಾಯಕ ಮಾತನಾಡಿ, “ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ತರಬೇತಿ ಶಿಬಿರ ಪ್ರಾರಂಭಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಈ ಟ್ರಸ್ಟ್‌ನ ಬೋಧಕ ಸಿಬ್ಬಂದಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ತರಬೇತಿ ನಡೆಸುವರು. ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವುದು ಈ ಟ್ರಸ್ಟ್‌ನ ಮುಖ್ಯ ಉದ್ದೇಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ; ಬೆಳ್ಳಂಬೆಳಗ್ಗೆಯೇ ಐವರ ದುರ್ಮರಣ

ಬಳಿಕ ರಾಜಾ ಮುಕುಂದ ನಾಯಕ ಸುರಪುರ ಕ್ರಿಯೇಶನ್ ಕ್ಲಬ್ ಅಧ್ಯಕ್ಷ ಮಾತನಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವ ಅಧ್ಯಕ್ಷ ರಾಜಾ ಸುಭಾಶ್ಚಂದ್ರ ನಾಯಕ, ರಾಜಕೀಯ ಮುಖಂಡ ರಾಜಾ ಸುಶಾಂಕ ನಾಯಕ, ಮಲ್ಲಣ್ಣ ಸಾಹುಕಾರ, ಹುಲಗಪ್ಪ ಪೂಜಾರಿ, ಚವ್ಹಾಲಕ್ಷ್ಮೀ, ಗ್ರಾ.ಪಂ ಅಧ್ಯಕ್ಷ ತಿಮ್ಮಣ್ಣ ದೇವಿಕೇರಾ, ರಾಜಾ ದೇವರಾಜ ನಾಯಕ, ರಾಜಾ ಉಡಚಪ್ಪ ನಾಯಕ ಹಾಗೂ ಬೋಧಕ ಸಿಬ್ಬಂದಿ ವರ್ಗದವರಾದ ಸಾಯಬಣ್ಣ, ಸಹನಾ, ಭಾಗ್ಯಶ್ರೀ, ಸೌಮ್ಯ, ಆದರ್ಶ ಹಾಗೂ ಟ್ರಸ್ಟಿನ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...