ಯಾದಗಿರಿ | ವಸತಿಶಾಲೆ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಪ್ರಕರಣ: ಪ್ರಮುಖ ಆರೋಪಿ ಬಂಧನ

Date:

ಯಾದಗಿರಿ ಜಿಲ್ಲೆಯ ವಸತಿಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಹಾಪುರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಎ1 ಆರೋಪಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಶಹಾಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ ಅವರು, ಆರೋಪಿಯ ಬಂಧನ ಆಗಿರುವುದಾಗಿ ತಿಳಿಸಿದರು.

ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆಯನ್ನೂ ಹಾಕಿದ್ದ ಎಂದು ತಿಳಿದುಬಂದಿದೆ.

ಘಟನೆ ಹಿನ್ನಲೆ

ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಚೀರಾಡುವ ಶಬ್ದ ಕೇಳಿಬಂದಿತ್ತು. ಹೀಗಾಗಿ ಎಲ್ಲರೂ ಓಡಿಹೋಗಿ ನೋಡುವಷ್ಟರಲ್ಲಿ ಓರ್ವ ವಿದ್ಯಾರ್ಥಿನಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ದೃಶ್ಯ ಕಂಡುಬಂದಿತ್ತು.

ಸಹಪಾಠಿ ವಿದ್ಯಾರ್ಥಿನಿಯರು, ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ಸ್ಟಾಪ್‌ ನರ್ಸ್​ಗೆ ವಿಷಯ ತಿಳಿದ ಕೂಡಲೇ ವಿದ್ಯಾರ್ಥಿನಿ ತಾಯಿಗೆ ವಿಷಯ ತಿಳಿಸಲಾಗಿತ್ತು. ಇನ್ನು ನವಜಾತ ಶಿಶುವನ್ನು ಶಹಾಪುರ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಸತಿ ಶಾಲೆ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣ : ನಾಲ್ವರು ಅಮಾನತು

ಆಸ್ಪತ್ರೆಗೆ ದಾಖಲು ಮಾಡಿದ ಕೂಡಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿ ಸಿಕ್ಕಿದೆ. ಆಯೋಗ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡು ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆಯಾದರೂ ಪ್ರಾಂಶುಪಾಲರಿಗೆ, ವಾರ್ಡನ್ ಹಾಗೂ ಸ್ಟಾಪ್‌ ನರ್ಸ್​ಗೆ ಮಾಹಿತಿ ಇಲ್ಲದ ಕಾರಣಕ್ಕೆ ಮೂವರ ವಿರುದ್ಧ ಪ್ರಕರಣ ದಾಖಲಿಸಿ ಅಮಾನತು ಮಾಡಲಾಗಿದೆ. ಅಷ್ಟೇ ಅಲ್ಲದೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ವಿದ್ಯಾರ್ಥಿನಿಯ ಸಹೋದರನ ಮೇಲೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...