ಯಾದಗಿರಿ | ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ದಸಂಸ ಆಗ್ರಹ

Date:

ಯಾದಗಿರಿ‌ ಜಿಲ್ಲೆ ಶಹಾಪುರ ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಖಂಡಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲೂಕು ಪ್ರಧಾನ ಸಂಚಾಲಕ ಚಂದ್ರಕಾಂತ ಬಜೇರಿ ಮನವಿ ಸಲ್ಲಿಸಿ ಮಾತನಾಡಿ, “ಶಹಾಪುರ ತಾಲೂಕಿನ ಬೇವಿನಹಳ್ಳಿ, ಅಣಬಿ, ಬೊಮ್ಮನಹಳ್ಳಿ, ಬಿದರಾಣಿ, ಮರ್ಕಲ್ ಕೊಳ್ಳೂರು ಸೇರಿದಂತೆ ಇನ್ನೂ ಬಹುತೇಕ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದರಲ್ಲಿ ಅವ್ಯವಹಾರ ನಡೆದಿದ್ದು, ಜೆಜೆಎಂ ಕಾಮಗಾರಿಯು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಯಾವುದೇ ಕಾಮಗಾರಿಯು ಪೂರ್ಣಗೊಳ್ಳದೆ ಅರ್ಧಕ್ಕೆ ಸ್ಥಗಿತಗೊಂಡಿದೆ. ಈ ಹಳ್ಳಿಯಲ್ಲಿ ಇನ್ನೂ ಕೂಡ ಸಿಸಿ ರಸ್ತೆಗಳಿಲ್ಲ. ಇದರಿಂದ ಗ್ರಾಮೀಣ ಭಾಗದ ಊರಿನ ಒಳಗಿನ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ತಗ್ಗು ಗುಂಡಿಗಳು ಬಿದ್ದಿವೆ” ಎಂದರು.

“ಈಗ ಮಳೆಗಾಲ ಆರಂಭವಾಗಿರುವುದರಿಂದ ರಸ್ತೆ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹಗೊಂಡು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅದರಿಂದ ರೋಗ ರುಜಿನಿಗಳಿಗೆ ದಾರಿ ಮಾಡಿಕೊಟ್ಟಂತಾಗಿದೆ. ಇದರಿಂದ ಗ್ರಾಮೀಣ ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಮತ್ತು ಈ ಕಾಮಗಾರಿಗಳಿಗೆ ಗುತ್ತಿಗೆದಾರರು ಈಗಾಗಲೇ ಪ್ರತಿಶತ ಶೇ.80ರಷ್ಟು ಬಿಲ್ಲುಗಳನ್ನು ಪಡೆದಿದ್ದಾರೆ. ಹಾಗಾಗಿ ಬೇರೆ ಗುತ್ತಿಗೆದಾರರು ಕೆಲಸ ಮಾಡಲು ಮುಂದೆಬರುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಜೆಎಂ ಕಾಮಗಾರಿಯ ಗ್ರಾಮದ ನಲ್ಲಿಗಳಿಗೆ ನೀರು ಪೂರೈಸುವ ಮೋಟಾರುಗಳಿಗೆ ಸರಬರಾಜು ಮಾಡಲು ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರತಿಯೊಂದಕ್ಕೂ ಪ್ರತ್ಯೇಕ ಅಂದಾಜು ಪಟ್ಟಿ ತಯಾರಿಸಿರುತ್ತಾರೆ. ಆದರೆ ವಾಸುದೇವ ಎಲೆಕ್ಟ್ರಾನಿಕ್ಸ್ ಎಂಬ ಒಂದೇ ಏಜೆನ್ಸಿಯವರಿಗೆ ಸುಮಾರು ₹50 ಲಕ್ಷಕ್ಕೂ ಅಧಿಕ ಮೊತ್ತದ ಗುತ್ತಿಗೆ ಕೊಟ್ಟಿದ್ದಾರೆ. ಆದರೆ ಗುತ್ತಿಗೆದಾರರು ಊರಲ್ಲೇ ಇರುವ ಹಳೆಯ ಟಿಸಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮತ್ತು ಕಳಪೆ ಗುಣಮಟ್ಟದ ಕೆಲಸ ಮಾಡಿ ಬಿಲ್‌ ಪಡೆದಿದ್ದಾರೆ. ಇದರಲ್ಲಿಯೂ ಕೂಡ ದೊಡ್ಡ ಮೊತ್ತದ ಹಗರಣ ನಡೆದಿರುವುದು ಕಂಡುಬರುತ್ತದೆ” ಎಂದು ಆರೋಪಿಸಿದರು.

“ಈ ಕಾಮಗಾರಿಯಲ್ಲಿ ಭಾಗಿಯಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಜತೆಗೆ ಈ ಹಗರಣದಲ್ಲಿ ಶ್ಯಾಮಿಲಾಗಿರುವ ಜೆಇ, ಎಇಇ ಹಾಗೂ ಇಇಗಳಂತಹ ಬಲಿಷ್ಠ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಈ ಅವ್ಯವಹಾರ ಕುರಿತು ಬೇರೆ ಇಲಾಖೆಯಿಂದ ಉನ್ನತ ಮಟ್ಟದ ತನಿಖೆ ಮಾಡಿಸಬೇಕು” ಎಂದು ಆಗ್ರಹಿಸಿದರು.

“ತನಿಖೆ ಕೈಗೊಳ್ಳುವಲ್ಲಿ ಒಂದು ವೇಳೆ ತಾವುಗಳು ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ ಏಳು ಸಾವು; ಶವಸಂಸ್ಕಾರಕ್ಕೆ ಪರದಾಟ!

ಈ ಸಂದರ್ಭದಲ್ಲಿ ರಾಜ್ಯ ಉಪ ಪ್ರ. ಸಂಚಾಲಕ ನಾಗಣ್ಣ ಬಡಿಗೇರ, ಖಜಾಂಚಿ ಪರಶುರಾಮ ರೋಜಾ, ತಾ.ಸಂ.ಸಂಚಾಲಕ ಮಾನಪ್ಪ ಮುದಕನ್ನೋರ, ತಾಲೂಕಾ ಪ್ರಧಾನ ಸಂಚಾಲಕ ಚಂದ್ರಕಾಂತ ಬಜೇರಿ, ದಸಂಸ ಮುಖಂಡ ಹಯ್ಯಾಳಪ್ಪ ದೇವಕರ್‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...