ಯಾದಗಿರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.18ರಂದು ಬೃಹತ್ ಪ್ರತಿಭಟನೆ

Date:

ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಮಾದಿಗ ದಂಡೋರ ಸಂಘಟನೆಯಿಂದ ಆಗಸ್ಟ್ 18 ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಹೋರಾಟದ ಕರಪತ್ರವನ್ನು ಗುರಮಿಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆ ಬಳಿಕ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಮಾದಿಗ ದಂಡೋರ ರಾಜ್ಯ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ ಮಾತನಾಡಿ, “ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿದೆ. ಇದನ್ನು ಖಂಡಿಸಿ ಆಗಸ್ಟ್ 18 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಎಮ್‌ಆರ್‌ಪಿಎಸ್ಆ ರಾಜ್ಯಾಧ್ಯಕ್ಷ ಬಿ. ನರಸಪ್ಪ ದಂಡೋರ ಅವರ ನೇತ್ರತ್ವದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಗಳಾಗಿ ತೆಲಂಗಾಣದ ಮಂದಕೃಷ್ಣ ಮಾದಿಗ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಜಿಲ್ಲೆಯ ಹೋರಾಟಗಾರರು, ಬುದ್ಧಿಜೀವಿಗಳು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಉಪಾಧ್ಯಕ್ಷ ಆಶನ್ನಾ ಬುದ್ಧ, ಮಲ್ಲು ಬೆಳಗೇರ, ಗುರುಮಠಕಲ್ ರವಿ ಬುರನೊಳ, ಗೌರವಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶರಣು ಅಮ್ಮಪಲ್ಲಿ, ಕಾರ್ಯದರ್ಶಿ ನಾಗೇಶ್, ಶಾಂತಪ್ಪ ಸೈದಾಪುರ್, ರಮೇಶ್ ಜ್ಞಾನವೃಕ್ಷ, ಅನಂತಪ್ಪ ಮುಕುಡಿ, ಭೀಮು ಗೂಡ್ಸೆ. ಭೀಮಶೆಂಕರ್ ಎಂ.ಟಿ., ವೆಂಕಟೇಪ್ಪ, ಪರಮಪ್ಪ ಕಾಕಲವಾರ, ರವಿ ಮಿನಿಗೇರಿ, ಭೀಮ್ ಗಿರಿ, ಉಮೇಶ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...