ಯಾದಗಿರಿ | ಬಿಸಿಯೂಟ ಯೋಜನೆ; ಮೊಟ್ಟೆ ಸಂಖ್ಯೆ ಕಡಿತ ಮಾಡದಂತೆ ಎಐಡಿಎಸ್‌ಒ ಆಗ್ರಹ

Date:

ಬಿಸಿಯೂಟ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗಳನ್ನು ಯಾವುದೇ ಕಾರಣಕ್ಕೂ ಮೊಟ್ಟೆಗಳ ಸಂಖ್ಯೆಯನ್ನು ಕಡಿತ ಮಾಡಬಾರದು ಎಂದು ಎಐಡಿಎಸ್‌ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆಗ್ರಹಿಸಿದ್ದಾರೆ.

“ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯಡಿ ನೀಡುವ ಮೊಟ್ಟೆಗಳ ಸಂಖ್ಯೆಯನ್ನು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಎಐಡಿಎಸ್‌ಒ ಜಿಲ್ಲಾ ಸಮಿತಿ ಖಂಡಿಸುತ್ತದೆ” ಎಂದರು.

“ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಣದ ಕೊರತೆಯ ಕಾರಣ ನೀಡಿ, ಮಕ್ಕಳಿಗೆ ನೀಡುವ ಮೊಟ್ಟೆಗಳ ಸಂಖ್ಯೆಯನ್ನು ಎರಡರಿಂದ ಒಂದಕ್ಕೆ ಇಳಿಸುವುದಾಗಿ ಸುತ್ತೋಲೆ ಮೂಲಕ ತಿಳಿಸಿದೆ. ಕಡಿಮೆ ಆದಾಯದ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳಲ್ಲಿ ಕಂಡುಬರುವ ತೀವ್ರ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಮೊಟ್ಟೆಗಳನ್ನು ನೀಡಲಾಗುತ್ತಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಪ್ರತಿದಿನ 5,000 ಮಂದಿ ಮಕ್ಕಳು ಅಪೌಷ್ಠಿಕತೆಯಿಂದ ಸಾಯುತ್ತಿದ್ದಾರೆ. ಸರಿಯಾದ ಪೌಷ್ಟಿಕ ಆಹಾರ ಸಿಗದೆ ರಾಜ್ಯದಲ್ಲಿ ಲಕ್ಷಾಂತರ ಮಕ್ಕಳ ಬೆಳವಣಿಗೆ ಕುಂಠಿತಗೊಂಡಿದೆ. ಬಿಸಿಯೂಟ ಯೋಜನೆ ಮತ್ತು ಶಾಲೆಗಳಲ್ಲಿ ನೀಡಲಾಗುವ ಮೊಟ್ಟೆ, ಬಾಳೆಹಣ್ಣು, ಚಿಕ್ಕಿಗಳ ಮೇಲೆ ಬಡಮಕ್ಕಳು ಅವಲಂಬಿತರಾಗಿದ್ದರು” ಎಂದರು.

ರಾಜ್ಯ ಸರ್ಕಾರದ ಪ್ರಸ್ತುತ ಕ್ರಮವು ಬಡ ಮಕ್ಕಳಿಗೆ ಅಗತ್ಯವಿರುವ ಪೌಷ್ಠಿಕಾಂಶದಿಂದ ವಂಚನೆ ಮಾಡಿದಂತಾಗುತ್ತದೆ. ಇತ್ತೀಚಿಗೆ ದೇಶಾದ್ಯಂತ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದನ್ನು ನಾವು ನೋಡಿದ್ದೇವೆ. ರಾಷ್ಟ್ರೀಯ ಸರಾಸರಿಯಲ್ಲಿ ಶಾಲೆಯಿಂದ ಹೊರಗಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳ ಕಂಡಿದೆ.

ತೀವ್ರ ಬಡತನ ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಶಾಲಾ ಮಕ್ಕಳೂ ಕೂಡ ಉದ್ಯೋಗಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಅಂತಹ ಸಮಯದಲ್ಲಿ, ಅವರ ಶಿಕ್ಷಣವನ್ನು ಮುಂದುವರಿಸುವಂತೆ, ಮಕ್ಕಳನ್ನು ಆಕರ್ಷಿಸಲು ಸಾಕಷ್ಟು ಮಾರ್ಗಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಹಣದ ಕೊರತೆಯಿದ್ದರೆ, ಸರ್ಕಾರ ಅದಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕೆ ವಿನಃ, ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಒಂದು ಮೊಟ್ಟೆಯನ್ನೂ ನೀಡಲು ಇಲಾಖೆಗೆ ಸಾಧ್ಯವಾಗದಿದ್ದರೆ ಇನ್ನೇನು ಕೊಡಲು ಸಾಧ್ಯ?

ರಾಜ್ಯ ಸರ್ಕಾರವು ತನ್ನ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಶಿಕ್ಷಣ ತಜ್ಞರ ಶಿಫಾರಸಿನಂತೆ ಎರಡು ಮೊಟ್ಟೆಗಳನ್ನು ನೀಡಬೇಕೆಂದು ಒತ್ತಾಯಿಸುತ್ತದೆ ಎಂದರು. ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುವ ಹಾಲಿಗೂ ಕೊರತೆ ಎದುರಾಗಿದೆ ಎಂಬ ವರದಿಗಳಿವೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾರ್ವಜನಿಕ ಈಜುಕೊಳದಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ಆಗ್ರಹ

ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ವಿಷಯದಲ್ಲಿ ಸರ್ಕಾರ ಯಾವುದೇ ನೆಪಗಳನ್ನು ಒಡ್ಡುವಂತಿಲ್ಲ. ಈ ಹಕ್ಕುಗಳನ್ನು ಕಾಪಾಡುವುದು ಪ್ರಜಾಪ್ರಭುತ್ವ ದೇಶದಲ್ಲಿನ ಸರ್ಕಾರದ ಮೂಲಭೂತ ಕರ್ತವ್ಯವಾಗಿದೆ. ಈ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ.

ಕರ್ನಾಟಕದ ಬಡ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಎಲ್ಲ ಯೋಜನೆಗಳನ್ನು ಮುಂದುವರಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತೆ ನಾವು ಎಲ್ಲಾ ಶಿಕ್ಷಣ ಪ್ರೇಮಿ ಜನತೆ, ಪೋಷಕರು ಮತ್ತು ಶಿಕ್ಷಣ ತಜ್ಞರಲ್ಲಿ ಎಐಡಿಎಸ್‌ಒ ವತಿಯಿಂದ ಕೋರುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...