ನಾಪತ್ತೆಯಾದ ವಿದ್ಯಾರ್ಥಿನಿ ಶನಿವಾರ ಗೋಗಿ ಸಮೀಪದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಸೌಜನ್ಯ (18) ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಸೌಜನ್ಯ ಕಾಲೇಜು ವಿದ್ಯಾರ್ಥಿನಿ ದೀಪಾವಳಿ ಅಮಾವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದಳು. ಶನಿವಾರ ಗೋಗಿ ಸಮೀಪದ ಕಾಲುವೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
‘ಪಾಂಡಾ, ರಾಜೇಶ್ ಹಾಗೂ ಚಿರು’ ಎಂಬವರು ಕಾರಿನಲ್ಲಿ ಬಂದು ಯುವತಿಯನ್ನು ಅಪಹರಿಸಿಕೊಂಡು ಹೋಗಿ, ಕೊಲೆ ಮಾಡಿ ಮೃತದೇಹವನ್ನು ಕಾಲುವೆಗೆ ಬಿಸಾಡಿದ್ದಾರೆʼ ಎಂದು ಮೃತರ ತಂದೆ ಶರಣಪ್ಪ ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ವಿವಾಹೇತರ ಸಂಬಂಧ ಆರೋಪ: ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ ವಿಕೃತಿ
ಆದರೆ ಈ ಕುರಿತು ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂಬ ಆರೋಪ ಕುಟುಂಬ ಹಾಗೂ ಗ್ರಾಮಸ್ಥರಿಂದ ಕೇಳಿಬರುತ್ತಿದೆ. ‘ಎಲ್ಲಾ ಆಯಾಮಗಳಲ್ಲಿ ಮಾಹಿತಿ ಸಂಗ್ರಹಣೆ ನಡೆಯುತ್ತಿದೆ. ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುತ್ತದೆ,’ ಎಂದು ಕೊಡೇಕಲ್ ಪೊಲೀಸರು ತಿಳಿಸಿದ್ದಾರೆ.





