ಯಾದಗಿರಿ | ಹೈಟೆಕ್ ಮೀನು ಮಾರುಕಟ್ಟೆಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಚಾಲನೆ

Date:

ಸುಸಜ್ಜಿತ ಮೀನು ಮಾರುಕಟ್ಟೆ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.

ಯಾದಗಿರಿ ನಗರದ ಹೈಟೆಕ್ ಮೀನು ಮಾರುಕಟ್ಟೆಯ ಮಾರಾಟ ಮಳಿಗೆಗಳಲ್ಲಿ ಮೀನು ಮಾರಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ, “ನಾನು ಮೀನುಗಾರರ ಬಡಾವಣೆಯಲ್ಲಿಯೇ ಇದ್ದು ಹತ್ತಿರದಿಂದ ಎಲ್ಲರ ಸಮಸ್ಯೆಗಳನ್ನು ಕಂಡಿದ್ದೇನೆ. ಹಾಗಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ನನಗೆ ಗೊತ್ತಿದೆ. ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದಲ್ಲಿ ನಾನು ಪರಿಹರಿಸಲು ಮುತುವರ್ಜಿ ವಹಿಸುವೆ” ಎಂದು ತಿಳಿಸಿದರು.

“ಮೀನುಗಾರಿಕೆ ಇಲಾಖೆಯಿಂದ ಬರುವ ಸೌಲಭ್ಯಗಳನ್ನು ನೀವು ಪಡೆದುಕೊಂಡು ಬೆಳವಣಿಗೆ ಹೊಂದಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಮುಖ್ಯ ವಾಹಿನಿಗೆ ತರಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀನು ಮಾರುಕಟ್ಟೆಗೆ ಕಾಂಕ್ರಿಟ್‌ ರಸ್ತೆ, ಚರಂಡಿ ವಿದ್ಯುತ್ ಕಂಬಗಳ ಅಳವಡಿಸುವ ಕಾರ್ಯ ವಿಳಂಬವಾಗಿರುವುದು ನನ್ನ ಗಮನಕ್ಕೆ ಬಂದಿದೆ. ಚುನಾವಣೆಯ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ನಗರಸಭೆ ಅಧಿಕಾರಿಗಳು ಶೀಘ್ರದಲ್ಲಿ ಈ ಕೆಲಸಗಳನ್ನು ಪೂರ್ಣಗೊಳಿಸಬೇಕು” ಎಂದು ತಿಳಿಸಿದರು.

ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, “ಬಹುತೇಕ ವರ್ಷಗಳಿಂದ ಜಿಲ್ಲೆಯಲ್ಲಿ ಮೀನುಗಾರರಿಗೆ ಮಾರಾಟ ಮಳಿಗೆ ಇರದೇ ಇದ್ದುದರಿಂದ ರಸ್ತೆ ಬದಿಯಲ್ಲಿ ಮೀನು ಮಾರಿ ಬದುಕುವ ಪರಿಸ್ಥಿತಿ ಇತ್ತು. ಇದನ್ನು ಮನಗಂಡು ನಿರಂತರ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಇದೀಗ ಹೈಟೆಕ್ ಮೀನು ಮಾರಾಟ ಮಳಿಗೆ ನಿರ್ಮಾಣಗೊಂಡಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಪುನರಾರಂಭಿಸಲು ಸಿಎಂ ಸಿದ್ದರಾಮಯ್ಯಗೆ ಆಗ್ರಹ

ಕಾರ್ಯಕ್ರಮದಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ರಾಜಣ್ಣ, ತಾಲೂಕು ಅಧಿಕಾರಿ ವೆಂಕಟೇಶ, ನಗರಸಭೆ ಎಇಇ ರಜನಿಕಾಂತ್, ಜೆ ಇ ರಾಕೇಶ್, ಸಹಾಯಕ ನಿಬಂಧಕ ತಕಿಯುದ್ದಿನ್, ಮೇಘನಾಥ ಬೆಳ್ಳಿ, ನಾಗರಾಜ್, ರವಿ ದಾಸನ್, ಮಾನಪ್ಪ ಆರ್ ಒ, ಮಲ್ಲಿಕಾರ್ಜುನ ಗೋಸಿ, ಮರೆಪ್ಪ ಬಿಳ್ಹಾರ, ತಾಯಪ್ಪ, ಕೃಷ್ಣಪ್ಪ, ಮಲ್ಲಪ್ಪ ಹಿರೇಬೋವಿ, ಭೀಮಣ್ಣ ಪೂಜಾರಿ, ದೇವಿಂದ್ರಪ್ಪ, ಯಂಕಪ್ಪ, ಮಲ್ಲಪ್ಪ, ಬಂಡಿ, ಅಂಬರೇಷ, ಯಲ್ಲಪ್ಪ ಗಂಟಿ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...