ಯಾದಗಿರಿ | ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆಗೆ ನಾಗೇಶ್ ಗದ್ದಿಗಿ ಕರೆ

Date:

70ನೇ ಕರ್ನಾಟಕ ರಾಜ್ಯೋತ್ಸವನ್ನು ಗುರುಮಠಕಲ್ ತಾಲ್ಲೂಕು ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲೂ ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಹೇಳಿದರು.

ಮಂಗಳವಾರ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ಎಲ್ಲಾ ಬಾಂಧವರಿಗೆ ಇದು ಸಡಗರ ಸಂಭ್ರಮದಿಂದ ಆಚರಿಸುವ ತಾಯಿನಾಡು ಹಬ್ಬ. ಈ ಹಬ್ಬವನ್ನು ತಾವುಗಳು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಿ ಎಂದು ಹೇಳಿದರು. ನಮ್ಮ ಗಡಿಭಾಗದಲ್ಲಿ ತೆಲುಗು, ಮರಾಠಿ, ತಮಿಳು ಸೇರಿದಂತೆ ಇನ್ನಿತರ ಭಾಷೆಗಳ ಪ್ರಭಾವ ಹೆಚ್ಚಾಗುತ್ತಿದ್ದು, ಇದನ್ನು ಹೋಗಲಾಡಿಸಲು ನಮ್ಮ ಹೆಮ್ಮೆಯ ಕನ್ನಡ ಭಾಷೆಯ ಪದಬಳಕೆಯನ್ನೇ ಮಾಡಿ ಎಲ್ಲಾ ಭಾಷೆಗಳನ್ನು ಗೌರವಿಸಿ ಆದರೆ ಕನ್ನಡನ್ನು ಪ್ರೀತಿಸಿ, ಕನ್ನಡ ನಾಡು-ನುಡಿ, ನೆಲ-ಜಲ ಸಂಸ್ಕೃತಿಯನ್ನು ರಕ್ಷಿಸುವ ಕಾರ್ಯ ನಾವೆಲ್ಲರೂ ಮಾಡಬೇಕು.

ಇದನ್ನೂ ಓದಿ: ಯಾದಗಿರಿ | 69ನೇ ಧಮ್ಮಚಕ್ರ ಪ್ರವರ್ತನಾ ದಿನಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ.1ರಂದು ಪಟ್ಟಣದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ವಿವಿಧ ಕಲಾ ತಂಡಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸಹಯೋಗದಲ್ಲಿ ಭವ್ಯವಾದ ಮೆರವಣಿಗೆಯನ್ನು ನಡೆಸಲಾಗುವುದು. ಇನ್ನುಳಿದ ಕಾರ್ಯಗಳ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಂಡು ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಗೌರವ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಾಕಾಲವರ, ಹಿರಿಯ ಗೌರವ ಸಲಹೆಗಾರ ನವಾಜರೆಡ್ಡಿ ಪೊಲೀಸ್ ಪಾಟೀಲ್, ತಾ.ಪ್ರ, ಕಾರ್ಯದರ್ಶಿ ಗೋಪಾಲಕೃಷ್ಣ ಮೇಧಾ, ತಾ, ಕಾರ್ಯದರ್ಶಿ ನರಸಿಂಹಲು ಗಂಗನೋಳ, ಉಪಾಧ್ಯಕ್ಷರಾದ ಕಾಶಪ್ಪ ದೊರೆ,ಎಸ್, ಪಿ ಮಹೇಶ್ ಗೌಡ,ಅವಿನಾಶ ಗೌಡ, ಸುರೇಶ್ ಚಿನ್ನರಾಥೋಡ್, ಭೀಮಶಪ್ಪತಲಾರಿ, ವೆಂಕಟೇಶ್,ಉದಯಕುಮಾರ ಕೊಂಕಲ, ರಾಮುಲು ಕೊಡುಗಂಟಿ, ಅಯಾಝ್ ಅಲಿ, ವಿಜಯ್, ಜಗದೀಶ್, ಆನಂದ್,ಮಲ್ಲಿಕಾರ್ಜುನ ಚೆಪೆಟ್ಲಾ,ಶರಣು, ಅಂಜಿ, ರವಿ ವಾರದ, ರವಿಶಂಕರ್ ಅಡಕೆ,ಅಂಜಪ್ಪ ಕಾಳೆಬೆಳಗುಂದಿ,ಶರಣಪ್ಪ ಹೊರಪೇಟೆ, ಜಗಪ್ಪ ನಕ್ಕ, ಬನ್ನು ಮಡುಗು, ಹನುಮೇಶ ಬೋಯಿನ್ ,ವೀರೇಶ್, ದೇವರಾಜ,ವೆಂಕಟಪ್ಪ, ಎಸ್,ರೆಡ್ಡಿ, ಗೌರೀಶ್,ಯಲ್ಲೂ ಪೂಜಾರಿ, ಸಿದ್ದಪ್ಪ ಮದ್ದೂರು, ಅನಿಲ್ ಮಡಿವಾಳ,ನಾಗೇಶ್ ಯಾದವ್, ಕೇಶವ್,ಸಿದ್ದಪ್ಪ, ಯಲ್ಲಪ್ಪ, ಬಗ್ಗಪ್ಪ, ಮಹೇಶ, ನವೀನ, ಅಯ್ಯಪ್ಪ, ಸಾಬಪ್ಪ, ಚಿಂಟು, ತಿಮ್ಮಪ್ಪ, ಚಾಂದ್ ಕಾಕಾಲವರ, ರಾಜಕುಮಾರ, ನರಸಪ್ಪ ಸೇರಿದಂತೆ ಇನ್ನೂ ಹಲವಾರು ಮುಖಂಡರು ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...