ಯಾದಗಿರಿ | ಕಳಪೆ ಮೊಟ್ಟೆ ವಿತರಣೆ : ಶಾಲಾ ಶಿಕ್ಷಕರ ವಿರುದ್ಧ ಎಸ್ಎಫ್‌ಐ ಪ್ರತಿಭಟನೆ

Date:

ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಇಮಾಮಸಾಬ್ ನದಾಫ್ ಮಾತನಾಡಿ, “ಹೊತಪೇಟ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ, ಗುಣಮಟ್ಟ ತರಕಾರಿ ಬಳಸಿ ಬಿಸಿಯೂಟ ನೀಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ಇಲ್ಲಿನ ಶಿಕ್ಷಕರು ಬೆದರಿಸುತ್ತಾರೆʼ ಎಂದು ದೂರಿದರು.

ʼಶಾಲಾಭಿವೃದ್ಧಿ ಹೆಸರಲ್ಲಿ ದೇಣಿಗೆ ಪೆಟ್ಟಿಗೆ ಇಟ್ಟು ಮಕ್ಕಳಿಂದ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಪ್ರತಿದಿನ ನೀವು ಹಣ ಹಾಕಲೇಬೇಕೆಂದು ಶಿಕ್ಷಕರು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಸರ್ಕಾರದಿಂದ ಉಚಿತ ಸಮವಸ್ತ್ರ ನೀಡಿದರೂ ಮಕ್ಕಳಿಂದ ಹಣ ಪಡೆಯುತ್ತಿದ್ದಾರೆ. ಇದರಿಂದ ಬಡ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶಾಲಾ ಮುಖ್ಯಗುರು ಮತ್ತು ಸಿಬ್ಬಂದಿ ಮಕ್ಕಳಿಗೆ ಸರಿಯಾಗಿ ಬಿಸಿಯೂಟ ವಿತರಣೆ ಮಾಡುತ್ತಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರವಾಗುವ ಪರಿಸ್ಥಿತಿ ಉಂಟಾಗಿದೆ. ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯ ಇಲ್ಲದೆ ನರಳುತ್ತಿದ್ದೇವೆ. ಇಂತಹ ತೊಂದರೆಗಳಿಂದ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಈ ಬಗ್ಗೆ ತಕ್ಷಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ‘ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದ ಹೈಕ ಜನರ ಜೀವನ ನರಕ’

ಎಸ್‌ಎಫ್‌ಐ ಸಂಘಟನೆ ಶಾಲೆಯ ವಿದ್ಯಾರ್ಥಿ ಘಟಕದ ಮುಖಂಡರಾದ ಮಲ್ಲಯ್ಯ, ಭೀಮರಾಯ, ಮನು, ರಾಜೇಶ್ವರಿ, ಮಲ್ಲಮ, ಕೆಪಿಆರ್‌ಎಸ್ ತಾಲೂಕ ಕಾರ್ಯದರ್ಶಿ ಭೀಮರಾಯ ಪೂಜಾರಿ ಮತ್ತು ರೈತ ಮುಖಂಡ ದೇವು ಹಾಗೂ ಮಹಿಳಾ ಮುಖಂಡರಾದ ಗೀತಾ ಮತ್ತು ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...