ಯಾದಗಿರಿ | ಉದ್ಯೋಗ ಖಾತ್ರಿ ಕೆಲಸ; ಗ್ರಾಮ ಪಂಚಾಯ್ತಿ ಮುಂದೆ ಕೃಷಿ ಕೂಲಿಕಾರರ ಸಂಘದಿಂದ ಧರಣಿ

Date:

ಉದ್ಯೋಗ ಖಾತ್ರಿಯ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು ಹಾಗೂ ಕೆಲಸ ಮಾಡದೇ ಸತಾಯಿಸುತ್ತಿರುವ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಮಂಗಳವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟ ಗ್ರಾಮ ಪಂಚಾಯ್ತಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಹೋತಪೇಟ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮದ ಜನರ ಕೈಗೆ ಸಿಗುತ್ತಿಲ್ಲ. ಫಾರಂ ನಂಬರ್ 6ರ ಸ್ವೀಕೃತಿ ಪತ್ರವನ್ನು ಕೂಡ ಕೂಲಿಕಾರರಿಗೆ ಕೊಡುತ್ತಿಲ್ಲ. ಕಾಲಹರಣ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಕಾಣೆಯಾಗಿದ್ದಾರೆ. ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಹಾಗಾಗಿ, ಪಿಡಿಓ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪಿಡಿಓ ಪ್ರತಿ ದಿನ ಪಂಚಾಯ್ತಿಯಲ್ಲಿ ಇರುವಂತೆ ಮಾಡಬೇಕು, ಈ ಹಿಂದೆ ದುಡಿದವರ 12 ಜನರ ಕೂಲಿ ಹಣ ಕೊಡಬೇಕು, ಉದ್ಯೋಗ ಖಾತ್ರಿ ಕಾಮಗಾರಿಗಳ ಕ್ರಿಯಾ ಯೋಜನೆ ಮಾಡುವಾಗ ಕೂಲಿಕಾರರನ್ನು ಸೇರಿಸಿ ಯೋಜನೆ ಮಾಡಬೇಕು, ಎಲ್ಲರಿಗೂ ಜಾಬ್ ಕಾರ್ಡ್‌ ಕೊಡಬೇಕು, ಆರೋಗ್ಯ ಕಾರ್ಡ್ ವಿತರಣೆ ಮಾಡಬೇಕು, ಸಮಯಕ್ಕೆ ಸರಿಯಾಗಿ NMMS ಮಾಡಬೇಕು, ಮೇಟಿಗಳ ನೋಂದಣಿ ಮಾಡಬೇಕು, ಮೇಟಿಗಳಿಗೆ ಗೌರವ ಧನ ಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನಿಟ್ಟು ಹೋತಪೇಟ ಗ್ರಾಮ ಪಂಚಾಯ್ತಿ ಮುಂದೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಮುಖಂಡರು ಧರಣಿ ಸತ್ಯಾಗ್ರಹ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಲಿಕಾರರ ಸಂಘ

ಈ ಪ್ರತಿಭಟನೆಯ ವೇಳೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷರಾದ ದವಳಸಾಬ್ ನದಾಫ್, ಶಹಾಪುರ ತಾಲೂಕು ಘಟಕದ ಮುಖಂಡರಾದ ಗೀತಾ ಹೋತಪೇಟ, ರಂಗಮ್ಮ ಕಟ್ಟಿಮನಿ, ಭೀಮರಾಯ ಪೂಜಾರಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಹೋತಪೇಟ ಗ್ರಾಮ ಘಟಕದ ಅಧ್ಯಕ್ಷರಾದ ದೇವಪ್ಪ ಈಳಗೇರ, ಕಾರ್ಯದರ್ಶಿ ನಾಗಮ್ಮ ಕುರುಬರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...