ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ; ಹಲವು ದಾಖಲೆ ವಶಕ್ಕೆ

Date:

ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ.

ಪಿಎಸ್‌ಐ ಪತ್ನಿ ಶ್ವೇತಾ ನೀಡಿದ್ದ ದೂರಿನ ಮೇರೆಗೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ(ಸನ್ನೇ ಗೌಡ) ಮೇಲೆ ಪ್ರಕರಣ ದಾಖಲಾಗಿದೆ. ಇದರಿಂದ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮೂಲಕ ಮೃತ ಪಿಎಸ್‌ಐ ಪರಶುರಾಮ್ ಸಾವಿನ ತನಿಖೆ ನಡೆಸಲು ಆದೇಶಿಸಿದ್ದರು.

ಇದರ ಬೆನ್ನಲ್ಲೇ ಸಿಐಡಿ ಪೋಲಿಸ್ ಡಿವೈಎಸ್‌ಪಿ ಪುನೀತ್ ಹಾಗೂ ಅಧಿಕಾರಿಗಳ ನೇತೃತ್ವದ ತಂಡ ಮೊದಲಿಗೆ ಯಾದಗಿರಿ ಡಿವೈಎಸ್‌ಪಿ ಬಸವೇಶ್ವರ ಹಾಗೂ ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ಹಣಮಂತ ಬಂಕಲಗಿ ಅವರನ್ನು ವಿಚಾರಣೆ ನಡೆಸಿದರು. ಪ್ರಕರಣದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಪ್ರಕರಣ ಗಂಭೀರತೆ ಪಡೆದುಕೊಂಡಿದ್ದು, ಸಿಐಡಿ ತಂಡವು ಎಲ್ಲ ಆಯಾಮಾಗಳಲ್ಲಿ ತನಿಖೆಗೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಮಹತ್ವದ ದಾಖಲೆ ವಶಕ್ಕೆ:

ಪಿಎಸ್‌ಐ ಪರಶುರಾಮ್ ಸಾವಿನ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ದಾಖಲೆಗಳನ್ನು ಹಾಗೂ ಪೆನ್‌ಡ್ರೈವ್, ಜೊತೆಗೆ ಮೊಬೈಲ್ ಫೋನ್ ಮೂಲಕ ನಡೆದ ಮಾತುಕತೆ ಹೀಗೆ ಮಹತ್ವದ ದಾಖಲೆಗಳನ್ನು ಬೆಂಗಳೂರಿನ ಸಿಐಡಿ ತಂಡ ತೆಗೆದುಕೊಂಡು ತನಿಖೆ ಆರಂಭಿಸಿದೆ.

ಪ್ರಕರಣದಲ್ಲಿ ಫೋನ್ ಸಂಭಾಷಣೆಯಲ್ಲಿ ನಡೆದ ವರ್ಗಾವಣೆಯ ಬಗ್ಗೆ ಫೋನ್ ಕಾಲ್ ಪರಿಶೀಲನೆ, ಪತ್ನಿ ಹಾಗೂ ಸಹಚರರ ಹೇಳಿಕೆ ಹೀಗೆ ಎಲ್ಲ ಆಯಾಮಗಳಲ್ಲಿ ಪ್ರಕರಣದ ಜಾಡು ಹಿಡಿದು ಸಿಐಡಿ ತಂಡ ತನಿಖೆ ನಡೆಸುತ್ತಿದೆ.

1001197745

ಪರಶುರಾಮ್ ಸಾವಿನ ಪ್ರಕರಣ ಸದ್ಯ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ. ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪರಶುರಾಮ್​ ಮನೆಗೆ ಭಾನುವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ‌ಅಲ್ಲದೇ, ಪ್ರಕರಣವನ್ನು ಸಿಐಡಿ ಬದಲಿಗೆ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ‌.

ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ತನಿಖೆಯಿಂದಷ್ಟೇ ಎಲ್ಲಾ ಸತ್ಯ ಹೊರಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...