ಅನುಮತಿ ಸಿಗದ ಹಿನ್ನೆಲೆಯಲ್ಲಿ ಶನಿವಾರ ಅಕ್ಟೋಬರ್ 25 ರಂದು ನಡೆಯಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನವನ್ನು ಮುಂದೂಡಲಾಗಿದೆ.
ಆಯೋಜಕರು ಪಥಸಂಚಲನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರು. ಅಕ್ಟೋಬರ್ 21ರಂದು ತಹಶೀಲ್ದಾರ್ ಕಚೇರಿಗೆ ಅಧಿಕೃತ ಮನವಿ ಸಲ್ಲಿಸಿದ್ದರು. ಆದರೆ ಗುರುವಾರ ಆಯೋಜಕರು ತಹಶೀಲ್ದಾರ್ ಕಚೇರಿಗೆ ತೆರಳಿದಾಗ, ತಹಶೀಲ್ದಾರ್ “ಪಥಸಂಚಲನಕ್ಕೆ ಅನುಮತಿ ನೀಡುವ ಅಧಿಕಾರ ನನಗೆ ಇಲ್ಲ” ಎಂದು ಸ್ಪಷ್ಟನೆ ನೀಡಿದರು.
ಈ ಹಿನ್ನೆಲೆಯಲ್ಲಿ ಆಯೋಜಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೊಸದಾಗಿ ಅರ್ಜಿ ಸಲ್ಲಿಸಿದರು. ಆದರೆ ಜಿಲ್ಲಾಧಿಕಾರಿಗಳು “ತರಾತುರಿಯಲ್ಲಿ ಅನುಮತಿ ನೀಡಲು ಸಾಧ್ಯವಿಲ್ಲ. ಸಮಯ ನೀಡಿ ಮತ್ತೊಂದು ದಿನಾಂಕ ನಿಗದಿಪಡಿಸಿ ಪುನಃ ಅರ್ಜಿ ಸಲ್ಲಿಸಬೇಕು” ಎಂದು ಸೂಚಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ದೇವಸ್ಥಾನದ ಬೀಗ ಮುರಿದು ಚಿನ್ನ ಹಾಗೂ ನಗದು ಹಣ ಕಳ್ಳತನ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಡಳಿತದ ಸೂಚನೆಯ ಹಿನ್ನೆಲೆ ಪಥಸಂಚಲನವನ್ನು ಮುಂದೂಡಲಾಯಿತು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.





