ಯಾದಗಿರಿ | ಸಿಬ್ಬಂದಿಗಳ ನಿರ್ಲಕ್ಷ್ಯ; ಕಸದ ತೊಟ್ಟಿಯಂತಾದ ಬಾಲಕರ ವಸತಿ ನಿಲಯ

Date:

ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ರಾಹುಲ್ ಕೊಲ್ಲೂರಕರ್ ಈದಿನದೊಂದಿಗೆ ಮಾತನಾಡಿ, “ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳೇ ಇಲ್ಲ. ನಿಲಯದ ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಊಟವನ್ನೂ ಸಮಯಕ್ಕೆ ಸರಿಯಾಗಿ ಕೊಡುತ್ತಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಸಂಬಂಧಪಟ್ಟವರು ಈ ಸಂಬಂಧ ಕ್ರಮ ಕೈಗೊಳ್ಳಬೇಕು” ಎಂದರು.

“ವಸತಿ ನಿಲಯದ ಕೆಲ ವಿದ್ಯಾರ್ಥಿಗಳು ಗುಟ್ಕಾ, ಧೂಮಪಾನ, ಮದ್ಯಪಾನದಂತ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇದು ಗನಮನದಲ್ಲಿದ್ದರೂ ಹಾಸ್ಟೆಲ್‌ ವಾರ್ಡನ್ ಮಾತ್ರ ಕಂಡೂ ಕಾಣದಂತೆ ಇದ್ದಾರೆ. ವಸತಿ ನಿಲಯದ ಆವರಣವು ಅವ್ಯವಸ್ಥೆಯ ಆಗರವಾಗಿದೆ. ವಸತಿ ನಿಲಯದ ತುಂಬೆಲ್ಲಾ ಅನ್ನ, ಸಾಂಬಾರ್ ಚೆಲ್ಲಾಪಿಲ್ಲಿಯಾಗಿರುವ ದೃಶ್ಯ ಕಾಣಿಸುತ್ತದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 30 at 8.57.04 PM

“ವಸತಿ ನಿಲಯಕ್ಕೆ ಊಟದ ಹಾಲ್, ಕಾರ್ಟ್ ಗಾದಿಗೆ, ಸಮರ್ಪಕ ಲೈಟ್, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೋಡಬೇಕೆಂದು” ಆಗ್ರಹಿಸಿದರು.

ಇದನ್ನೂ ಓದಿ: ಯಾದಗಿರಿ | ಈಶ್ವರಚಂದ್ರ ವಿದ್ಯಾಸಾಗರ್ 134ನೇ ಸ್ಮರಣ ದಿನಾಚರಣೆ

“ಹಾಸ್ಟೆಲ್‌ನಲ್ಲಿ ಇಷ್ಟೆಲ್ಲಾ ಅನಾಚಾರಗಳು ನಡೆಯುತ್ತಿದ್ದರೂ ತನಗೆ ಸಂಬಂಧವಿಲ್ಲವೆನ್ನುವಂತೆ ಇರುವ ವಾರ್ಡನ್ನನ್ನು ಕೂಡಲೇ ಅಮಾನತು ಮಾಡಬೇಕು” ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸಪ್ಪ ಮಾತನಾಡಿ, “ಮಾಹಿತಿ ತಿಳಿದಿದೆ. ವಾರ್ಡನ್ ಅವರಿಗೆ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಸೂಚಿಸಿರುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...