ಯಾದಗಿರಿ | ಕುರಿಗಳ ಕತ್ತು, ಹೊಟ್ಟೆ ಸೀಳಿದ ದುಷ್ಕರ್ಮಿಗಳು; ಕ್ರಮಕ್ಕೆ ಆಗ್ರಹ

Date:

ಕುರಿಗಳನ್ನು ಕುತ್ತಿಗೆ ಮತ್ತು ಹೊಟ್ಟೆ ಭಾಗದಲ್ಲಿ ಕೊಯ್ದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಮಂಡಗಳ್ಳಿ ಗ್ರಾಮದ ಮಲ್ಲಪ್ಪ ಅವರು ಕುರಿಸಾಕಾಣಿಕೆ ಮಾಡಲು ಕಳೆದ 10 ತಿಂಗಳ ಹಿಂದಷ್ಟೆ 30 ಕುರಿಗಳನ್ನು ಖರೀದಿಸಿದ್ದರು. ಮನೆ ಹತ್ತಿರದ ಕುರಿಹಟ್ಟಿಯಲ್ಲಿ ಕುರಿಗಳನ್ನು ಬಿಡಲಾಗುತ್ತಿತ್ತು. ನಿನ್ನೆ ರಾತ್ರಿ ದುಷ್ಕರ್ಮಿಗಳು ಕುರಿಗಳ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

ಘಟನೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಯಾರೆಂದು ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರ ರಾತ್ರಿ ಸಮಯದಲ್ಲಿ ತಂದೆಗೆ ಮೈ ಹುಷಾರಿಲ್ಲವೆಂದು ಹಟ್ಟಿ ಬಿಟ್ಟು ಮನೆಯಲ್ಲಿ ಮಲಗಿದ್ದೆ. ಈ ಸಮಯ ನೋಡಿಕೊಂಡು ಕಿಡಿಗೇಡಿಗಳು 16 ಕುರಿಗಳ ಕತ್ತು, ಹೊಟ್ಟೆ ಸೀಳಿ ಹತ್ಯೆ ಮಾಡಿದ್ದಾರೆ” ಎಂದು ಸಂತ್ರಸ್ತ ಮಲ್ಲಪ್ಪ ತಿಳಿಸಿದ್ದಾರೆ.

“ಅಂದಾಜು 5 ಲಕ್ಷ ರೂ.ಮೌಲ್ಯದ ನಷ್ಟ ಉಂಟಾಗಿದೆ. ಉದ್ದೇಶ ಪೂರ್ವಕವಾಗಿ ಕುರಿಗಳನ್ನು ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕುರಿಗಾಹಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು. ತಪ್ಪತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು” ಎಂದು ಯುವ ಹೋರಾಟಗಾರ ದಲಿತ ಮುಖಂಡ ಶರಣರೆಡ್ಡಿ ಹತ್ತಿಗೂಡುರ್ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸಾಲ ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಕಿರುಕುಳ; ರೈತ ಮಹಿಳೆ ಆತ್ಮಹತ್ಯೆ

“ಕುರಿಗಳ ಮರಣದಿಂದ ಕುರಿಗಾಹಿಗೆ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಉಂಟ್ಟಾಗಿದ್ದು, ಅತ್ಯಂತ ದುಃಖ ಉಂಟು ಮಾಡಿದೆ. ಗ್ರಾಮದಲ್ಲಿಯೂ ದುಃಖಮಯ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಇಲಾಖೆಯಿಂದ ಸಮಗ್ರ ತನಿಖೆ ನಡೆಯಬೇಕು. ಸರ್ಕಾರ‌, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಕುರಿಗಾಹಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...