ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

Date:

ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ.

ಮೃತರನ್ನು ಅಚೋಲಾ ತಾಂಡದ ಕೃಷ್ಣ ರಾಠೋಡ್ (10), ಜಯ ರಾಠೋಡ್ 14 ಹಾಗೂ ಅಮರ್ ರಾಠೋಡ್ (12) ಎಂದು ಗುರುತಿಸಲಾಗಿದೆ.

ಈ ಮೂವರು ಸಹೋದರಾಗಿದ್ದು, ಬೇಸಿಗೆ ರಜೆ ಇದ್ದ ಕಾರಣ ಪೋಷಕರ ಕೆಲಸದಲ್ಲಿ ನೆರವಾಗಲೆಂದು ಕುರಿ ಮೇಯಿಸಲು ಹೋಗಿದ್ದರು. ಮಧ್ಯಾಹ್ನ ಊಟದ ವೇಳೆಗೆ ಅವರು ಕೊಂಡೊಯ್ದಿದ್ದ ನೀರು ಬಿಸಿಲಿನ ತಾಪಕ್ಕೆ ಬಿಸಿಯಾಗಿತ್ತು. ಹೀಗಾಗಿ, ಹತ್ತಿರದಲ್ಲೇ ಇದ್ದ ಹೊಂಡದಲ್ಲಿ ತಣ್ಣನೆಯ ನೀರು ಇರುತ್ತದೆಂದು ಕುಡಿಯಲು ಹೋಗಿದ್ದಾರೆ. ಈ ವೇಳೆ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದು, ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕರು ಬಿದ್ದು, ಮೃತಪಟ್ಟ ಹೊಂಡವನ್ನು ಕೋಳಿ ಫಾರ್ಮ್‌ ನಡೆಸುವ ಖಾಸಗಿ ಕಂಪನಿಯೊಂದು ಇತ್ತೀಚೆಗೆ ನಿರ್ಮಿಸಿತ್ತು. ಮಳೆ ಸುರಿದಿದ್ದರಿಂದ ಹೊಂಡದಲ್ಲಿ ನೀರು ನಿಂತಿದೆ. ಹೊಂಡದ ದಡವು ಇನ್ನೂ ಗಟ್ಟಿಯಾಗಿಲ್ಲದಿದ್ದ ಕಾರಣ, ಬಾಲಕರು ಕಾಲು ಇಡುತ್ತಿದ್ದಂತೆಯೇ ಜಾರಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...