ಜಾನುವಾರು ಮೇಯಿಸಲು ಹೋದ ಇಬ್ಬರು ಯುವಕರು ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಮಾಚನೂರ ಸಿದ್ದಪ್ಪ (21), ರಮೇಶ (17) ನೀರಿನಲ್ಲಿ ಕೊಚ್ಚಿಕೊಂಡು ಹೋದವರು ಎಂದು ತಿಳಿದು ಬಂದಿದೆ.
ಇಬ್ಬರು ದನಗಾಹಿ ಯುವಕರು ನದಿ ಬಳಿ ನೀರು ಕುಡಿಸಲು ಹೋಗಿದ್ದಾರೆ. ಈ ವೇಳೆ ಈಜಾಡಲು ನದಿಗೆ ಇಳಿದ ವೇಳೆ ದುರ್ಘಟನೆ ಸಂಭವಿಸಿದೆ. ಕೊಚ್ಚಿಕೊಂಡ ಹೋದ ಇಬ್ಬರಲ್ಲಿ ಓರ್ವನಿಗೆ ಈಜು ಬರುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರೆದಿದ್ದು, ಇನ್ನೂ ಮೃತದೇಹ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





