ಯಾದಗಿರಿ | ನಿಲ್ಲದ ರೈತರ ಆತ್ಮಹತ್ಯೆ : 2 ವರ್ಷದಲ್ಲಿ 100 ಅನ್ನದಾತರ ಸಾವು

Date:

ಯಾದಗಿರಿ ಜಿಲ್ಲೆಯಲ್ಲಿ‌ ಕಳೆದ ಎರಡು ವರ್ಷದಲ್ಲಿ ಬರೋಬ್ಬರಿ 100 ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ರೈತ ಸಮುದಾಯದಲ್ಲಿ ಆತಂಕ ಮೂಡಿಸಿದೆ.

ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಆರು ತಾಲ್ಲೂಕುಗಳಿವೆ. ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾಗಿವೆ. ಆದರೆ ಬರ, ಬೆಲೆ ಕುಸಿತ, ಅತೀವೃಷ್ಟಿ, ಅನಾವೃಷ್ಟಿ ತತ್ತರಿಸಿತು. ಹೀಗಾಗಿ ಸಾಲ ಬಾಧೆಯಿಂದ 2023-24ನೇ ಸಾಲಿನಲ್ಲಿ 70 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25 ರಲ್ಲಿ 30 ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ.

ಒಟ್ಟು ಸಾವಿಗೀಡಾದ ಪ್ರಕರಣಗಳನ್ನು ಕೃಷಿ ಇಲಾಖೆ ಮಾನದಂಡಗಳಿಗೆ ಅನುಗುಣವಾಗಿ ಪರಿಗಣಿಸಿ ಪರಿಹಾರ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 70 ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಈ ಪೈಕಿ ಸಮರ್ಪಕ ಕಾರಣ ಲಭ್ಯವಾಗದ ಕಾರಣ 4 ಅರ್ಜಿ ತಿರಸ್ಕೃತಗೊಳಿಸಿದೆ. ಬಹುತೇಕ 66 ಪ್ರಕರಣಗಳ ರೈತ ಕುಟುಂಬಗಳಿಗೆ ಈಗಾಗಲೇ ರಾಜ್ಯ ಸರ್ಕಾರದ ತಲಾ ₹5 ಲಕ್ಷ ಪರಿಹಾರ ಒದಗಿಸಲಾಗಿದೆ. 2024-25ರಲ್ಲಿ ದಾಖಲಾದ 30 ಪ್ರಕರಣಗಳಲ್ಲಿ 4 ಅರ್ಜಿ ತಿರಸ್ಕೃತಗೊಳಿಸಿದೆ. 26 ಅರ್ಜಿಗಳಲ್ಲಿ ಕೆಲವರಿಗೆ ಪರಿಹಾರ ತಲುಪಿದೆ. ಉಳಿದವರಿಗೆ ಇನ್ನಷ್ಟೇ ಅನುಮೋದನೆ ನೀಡಿ ಪರಿಹಾರ ನೀಡಬೇಕಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಆತ್ಮಹತ್ಯೆಗೆ ಮುಖ್ಯವಾಗಿ ಬೆಳೆ ನಷ್ಟ, ಬೆಲೆ ಕುಸಿತವೇ ಕಾರಣ. ಬೆಳೆ ನಿರೀಕ್ಷೆಯಲ್ಲಿರುವ ರೈತ ನಷ್ಟವಾದಾಗ ಸಾಲದ ಹೊರೆ ಸಹಿಸದೆ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಈ ಹಿಂದಿನ ವರ್ಷ ಉತ್ತಮ ಬೆಲೆ ಬಂದಿದ್ದ ಬೆಳೆಯನ್ನೇ ಬಹುತೇಕ ರೈತರು ಬೆಳೆಯುವುದರಿಂದ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತವಾಗುತ್ತದೆ. ಬೆಳೆಗೆ ಸೂಕ್ತ ಬೆಲೆ ಸಿಗದಿರುವುದು. ಹಾನಿಯಾದ ಬೆಳೆಗೆ ಸಕಾಲಕ್ಕೆ ವಿಮಾ ಸೌಲಭ್ಯ ದಕ್ಕದಿರುವುದು ರೈತರನ್ನು ಕಂಗಾಲಾಗಿಸುತ್ತಿದೆ.

ಶಹಾಪುರ ತಾಲ್ಲೂಕಿನಲ್ಲಿ ಹೆಚ್ಚು ರೈತರ ಆತ್ಮಹತ್ಯೆ :

ʼ2023-24ರಲ್ಲಿ ಜಿಲ್ಲೆಯ ಶಹಾಪುರ (21), ವಡಗೇರಾ (12), ಸುರಪುರ (20), ಹುಣಸಗಿ (15), ಯಾದಗಿರಿ (1), ಗುರುಮಠಕಲ್ (1) ತಾಲೂಕುಗಳಲ್ಲಿ ಒಂದು ವರ್ಷದಲ್ಲಿ 70 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25ರಲ್ಲಿ ಜಿಲ್ಲಾದ್ಯಂತ 30 ಜನ ರೈತರು ಬೆಳೆ ಹಾನಿ, ಬ್ಯಾಂಕ್‌ ಸಾಲ ಸೇರಿದಂತೆ ವಿವಿಧ ಕಾರಣದಿಂದ ನೇಣಿಗೆ ಕೊರಳೊಡ್ಡಿದ್ದಾರೆ.

ಅಚ್ಚರಿ ಸಂಗತಿ ಎಂದರೆ 2023-24 ಹಾಗೂ 2024-25ರ ಎರಡು ವರ್ಷದ ಅವಧಿಯಲ್ಲಿ ದಾಖಲಾದ 100 ಆತ್ಮಹತ್ಯೆ ಪ್ರಕರಣಗಳಲ್ಲಿ ಶಹಾಪುರ ಒಂದೇ ತಾಲ್ಲೂಕಿನಲ್ಲಿ 32 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದರು. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆಯಾದ 2023-24ನೇ ಸಾಲಿನಲ್ಲಿ ಹೆಚ್ಚು ರೈತರು ಜೀವ ಕಳೆದುಕೊಂಡಿದ್ದಾರೆ. ಇನ್ನು ಅಧಿಕ ನೀರಾವರಿ ಪ್ರದೇಶ ಹೊಂದಿರುವ ಶಹಾಪುರ, ಸುರಪುರ ಹಾಗೂ ಹುಣಸಗಿ ತಾಲ್ಲೂಕಿನಲ್ಲಿ ಹೆಚ್ಚು ರೈತರು ಜೀವ ತ್ಯಜಿಸಿರುವುದು ಗಮನಿಸಬಹುದು.

WhatsApp Image 2025 03 22 at 3.20.55 PM

2020-23ರ ಮೂರು ವರ್ಷದಲ್ಲಿ 115 ರೈತರ ಸಾವಿಗೆ ಶರಣು :

ಯಾದಗಿರಿ ಜಿಲ್ಲೆಯಲ್ಲಿ 2020ರಿಂದ ಫೆಬ್ರವರಿ 15ರವರೆಗೆ 2023ರವರೆಗೆ ಒಟ್ಟು 115 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸರ್ಕಾರದ ಅಧಿಕೃತವಾಗಿ ನೀಡಿದ ಅಂಕಿ-ಅಂಶಗಳೇ ಹೇಳುತ್ತವೆ. 2020-21ರಲ್ಲಿ 41, 2021-22ರಲ್ಲಿ 61 ಹಾಗೂ 2022-23ರ ಫೆ.23ರವರೆಗೆ 13 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ವಾಮಿನಾಥನ್‌ ವರದಿ ಜಾರಿಗೊಳಿಸಿ :

ಯಾದಗಿರಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ ಬೆಳೆದ ಭತ್ತ, ಹತ್ತಿ, ಮೆಣಸಿನಕಾಯಿ, ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರಕುತ್ತಿಲ್ಲ. ಹವಾಮಾನ ವೈಪರೀತ್ಯದಿಂದ ಸಾಗುವಳಿಗಾಗಿ ಮಾಡಿದ ಖರ್ಚು ಬಾರದಂತಹ ಪರಿಸ್ಥಿತಿ ಇದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀಸುವ ಆದೇಶವಿದ್ದರೂ ಖರೀದಿ ಪ್ರಕ್ರಿಯೆ ನಡೆಯುವುದಿಲ್ಲ. ಇದರಿಂದ ಸಾಲ ತೀರಿಸಲು ಸಾಧ್ಯವಾಗದ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆʼ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಚೆನ್ನಪ್ಪ ಆನೆಗೊಂದಿ ಹೇಳುತ್ತಾರೆ.

ʼಎಲ್ಲ ಪಕ್ಷಗಳು ಅಧಿಕಾರಕ್ಕೇರುವ ಮುನ್ನ ರೈತರನ್ನು ಸುಳ್ಳು ಹೇಳುವುದು ವಾಡಿಕೆ ಎಂಬಂತಾಗಿದೆ. ಜನಪ್ರತಿನಿಧಿಗಳಿಗೆ ರೈತರ ಬಗ್ಗೆ ಕಾಳಜಿ, ಪ್ರಾಮಾಣಿಕತೆ ಕಿಂಚಿತ್ತೂ ಇಲ್ಲ. ರೈತರ ಕಲ್ಯಾಣ ಎಂಬುದು ಯಾವಾಗಲೂ ಚುನಾವಣೆ ವಿಚಾರವಾಗಿದೆ. ರೈತರು ಬೆಳೆದ ಯಾವುದೇ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯಿಂದ ರೈತರು ಪ್ರಗತಿಯಾಗಲು ಸಾಧ್ಯವಿಲ್ಲ. ಹೀಗಾಗಿ ಸ್ವಾಮಿನಾಥನ್‌ ವರದಿ ಜಾರಿಯಾಗಬೇಕು. ರೈತ ವಿರೋಧಿ ಮೂರು ಕೃಷಿ ಕಾಯ್ದೆ ರದ್ದಾಗಬೇಕುʼ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ : ಸವಾರರಿಬ್ಬರ ಸಾವು

ʼಗ್ರಾಮೀಣ ಭಾಗದಲ್ಲಿ ಕುಡಿತ, ಜೂಜಿಗೆ ಯುವ ಸಮೂಹ ಬಲಿಯಾಗುತ್ತಿದೆ. ಎಲ್ಲೆಡೆ ಭ್ರಷ್ಟಾಚಾರ ಮಿತಿಮೀರಿದೆ. ಇದನ್ನು ತಡೆಗಟ್ಟುವ ಕೆಲಸ ಮಾಡಬೇಕಿದೆ. ಸರ್ಕಾರದ ಯೋಜನೆಗಳು ರೈತರಿಗೆ ನೇರವಾಗಿ ತಲುಪದಿರುವುದು, ಆರ್ಥಿಕ ಸಂಕಟ ಎದುರಾದ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯದೇ ಇರುವುದು ಆತ್ಮಹತ್ಯೆಗೆ ಕಾರಣ ಎನ್ನಬಹುದು. ಇವರಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ಸಾವಿಗೆ ಶರಣಾಗುತ್ತಿರುವುದು ನೋವಿನ ಸಂಗತಿ. ಈ ಬಗ್ಗೆ ಸರ್ಕಾರ, ಈ ಭಾಗದ ಜನಪ್ರತಿನಿಧಿಗಳು ಗಂಭೀರವಾಗಿ ಯೋಚಿಸಬೇಕಾಗಿದೆʼ ಎಂದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...