ಸಂಚಾರ ಠಾಣೆಯ ಪೊಲೀಸ್ ಠಾಣೆಯ ಪೇದೆ ಮತ್ತು ಆತನ ಸಹೋದರ ಇಬ್ಬರು ಸಂಬಂಧದಲ್ಲಿ ಚಿಕ್ಕಮ್ಮ ಆಗಿರುವ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ, ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಗುರುಮಿಠಕಲ್ ತಾಲೂಕಿನಲ್ಲಿ ಕೇಳಿ ಬಂದಿದೆ.
ಈ ಕುರಿತು ಸಂಚಾರಿ ಪೊಲೀಸ್ ಪೇದೆ ರಮೇಶ್ ಹಾಗೂ ಜೆಸ್ಕಾಂನಲ್ಲಿ ಕೆಲಸ ನಿರ್ವಹಿಸುತ್ತಿರುವ ಲಕ್ಷ್ಮಣ್ ವಿರುದ್ಧ ಮಹಿಳೆ ನೀಡಿದ ದೂರಿನ ಮೇರೆಗೆ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಬ್ಬರು ಸಹೋದರರು ಬಲವಂತವಾಗಿ ಕಳೆದ ಏಳು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯ ಯಾರಿಗೂ ಹೇಳಬೇಡ ಅಂತ ಜೀವ ಬೆದರಿಕೆ ಹಾಕಿ ಬ್ಲಾಕ್ಮೇಲ್ ಮಾಡಿದ್ದಾರೆ ಎಂದು ವಿವಾಹಿತ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳಾ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ 323, 504, 506, 376 (2)(m) ಐಪಿಸಿ ಅಡಿಯಲ್ಲಿ ಇಬ್ಬರ ವಿರುದ್ಧ ಸೆ.1ರಂದು ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಬೀದರ್ | ವಿಶ್ವದಲ್ಲಿ ಸಮಾನತೆ ಸಿದ್ದಾಂತ ಬೋಧಿಸಿದ ಮೊದಲಿಗ ಬಸವಣ್ಣ : ತೋಂಟದ ಸಿದ್ದರಾಮ ಸ್ವಾಮೀಜಿ





