ರಾತ್ರಿ ಮನೆಯಲ್ಲಿ ಹಾವು ಕಡಿದು ಕನ್ನಡಪರ ಯುವ ಹೋರಾಟಗಾರ ಮೃತಪಟ್ಟಿರುವ ಘಟನೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ನಿಂಗಣ್ಣ ಸಂಕ್ರಡ್ಗಿ ಮೃತರು ಎಂದು ತಿಳಿದು ಬಂದಿದೆ.
ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಶನಿವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಮನೆಯಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ಕಲಬುರಗಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು, ಆದರೆ ಚಿಕಿತ್ಸೆಗೆ ಫಲಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಯುವ ಕನ್ನಡ ಹೋರಾಟಗಾರ ಮೃತ ಸುದ್ದಿ ಕೇಳಿ ಹೋರಾಟಗಾರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.





