ಬೆಂಗಳೂರು | ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Date:

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.

ಮೃತಪಟ್ಟ ಯುವಕನನ್ನು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಮೇಶ್ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಮೇಶ್‌ ಹೊಟ್ಟೆ ನೋವು ಎಂದು ಭಾನುವಾರ ಬೆಳಗ್ಗೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ನಾರಾಯಣ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ಪರೀಕ್ಷೆ ಮಾಡಿದ್ದ ಆಸ್ಪತ್ರೆಯ ವೈದ್ಯರು ಇಸಿಜಿ ಸಹಿತ ಇನ್ನಿತರ ಎಲ್ಲಾ ಟೆಸ್ಟ್ ಮಾಡಿದ್ದು, ರಿಪೋರ್ಟ್ ಎಲ್ಲಾ ಸರಿಯಾಗಿದೆ. ಯಾವ ತೊಂದರೆ ಇಲ್ಲ ಎಂದು ಹೊಟ್ಟೆ ನೋವಿಗಾಗಿ ಔಷಧಿ ಕೊಟ್ಟು ಕಳುಹಿಸಿದ್ದರು. ಔಷಧಿ ಸೇವಿಸಿದ ಬಳಿಕ ತೀವ್ರ ತಲೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅದೇ ಆಸ್ಪತ್ರೆಗೆ ಕರೆ ತರಲಾಯಿತು. ಈ ವೇಳೆ ಚಿಕಿತ್ಸೆ ನೀಡುತ್ತಿರುವಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ‌

ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕ ರಮೇಶ್ ಸಾವನ್ನಪ್ಪಿರುವುದಾಗಿ ಆರೋಪಿಸಿ ಆತನ ಕುಟುಂಬದ ಸದಸ್ಯರು ಹಾಗೂ ಪರಿಚಯಸ್ಥರು ಆಸ್ಪತ್ರೆಯ ಮುಂದೆ ಧರಣಿ ನಡೆಸಿದ್ದಾರೆ. ಯುವಕನ ಸಾವಿಗೆ ನ್ಯಾಯ ಕೊಡಬೇಕು ಎಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಾಹಿತಿ ಅರಿತ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಎಷ್ಟೇ ಮನವಿ ಮಾಡಿದರು ಕೂಡ ಪ್ರತಿಭಟನೆ ನಿಲ್ಲಿಸಲು ಒಪ್ಪಲಿಲ್ಲ. ಕೊನೆಗೆ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದರೆ ಮಾತ್ರ ಯುವಕನ ಸಾವಿಗೆ ಕಾರಣ ತಿಳಿಯಬಹುದು. ಹಾಗಾಗಿ, ಶವ ಬಿಟ್ಟು ಕೊಡುವಂತೆ ವಿನಂತಿ ಮಾಡಿದ್ದಕ್ಕೆ ಒಪ್ಪಿದ ಕುಟುಂಬಸ್ಥರು, ಕೊನೆಗೆ ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಕೊಂಡರು. ಆ ಬಳಿಕ ಆ್ಯಂಬುಲೆನ್ಸ್ ಮೂಲಕ ಶವವನ್ನು ಸಾಗಿಸಲಾಯಿತು.

ರಮೇಶ್ ಅವರು ಹೊಟ್ಟೆಪಾಡಿಗಾಗಿ ದುಡಿದು ತಿನ್ನಲು ಬೆಂಗಳೂರಿಗೆ ಹೋದವರು ಅಚಾನಕ್ಕಾಗಿ ಸಾವಿನ ದವಡೆಗೆ ಸಿಲುಕಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಈ ಘಟನೆಯ ಬಗ್ಗೆ ಈ ದಿನ. ಕಾಮ್ ಜೊತೆಗೆ ಮಾತನಾಡಿರುವ ಮೃತಪಟ್ಟ ರಮೇಶ್ ಅವರ ಮಾವ ಬಸವರಾಜ್, “ನನ್ನ ಅಳಿಯನ ಆರೋಗ್ಯದಲ್ಲಿ ಯಾವ ಸಮಸ್ಯೆ ಇರಲಿಲ್ಲ. ಇದೇ ಮೊದಲ ಬಾರಿಗೆ ಹೊಟ್ಟೆ ನೋವು ಎಂದು ಆಸ್ಪತ್ರೆ ಹೋಗಿದ್ದರು. ಎಲ್ಲ ಟೆಸ್ಟ್ ಮಾಡಿ ವೈದ್ಯರೇ ಏನು ಸಮಸ್ಯೆ ಇಲ್ಲ ಅಂತ ಹೇಳಿ, ಹೊಟ್ಟೆ ನೋವು ಕಡಿಮೆ ಆಗುವುದಕ್ಕೆ ಔಷಧಿ ಕೊಟ್ಟಿದ್ದಾರೆ. ಔಷಧಿ ಸೇವಿಸಿದ ಮೇಲೆ ತಲೆನೋವು ಕಾಣಿಸಿಕೊಂಡು ಮತ್ತೆ ಆಸ್ಪತ್ರೆಗೆ ಹೋಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿರುವಾಗ ಸಾವು ಸಂಭವಿಸಿದೆ. ಸಮಸ್ಯೆ ಇದೆ ಅಂತ ಹೇಳಿದ್ದಿದ್ದರೆ ನಾವು ಹೆಚ್ಚಿನ ಚಿಕಿತ್ಸೆಗೆ ಬೇರೆ ಕಡೆಗೆ ಕರೆದುಕೊಂಡು ಹೋಗುತ್ತಿದ್ದೆವು” ಎಂದು ತಿಳಿಸಿದರು.

“ವೈದ್ಯರು ಸರಿಯಾಗಿ ಪರೀಕ್ಷೆ ನಡೆಸಿಲ್ಲ. ಎಲ್ಲಾ ಸರಿ ಇದೆ ಅಂತ ನಿರ್ಲಕ್ಷ್ಯ ಮಾಡಿದ್ದಾರೆ.‌ ಇದರಿಂದ ನಮ್ಮ ಅಳಿಯನನ್ನು ಕಳೆದುಕೊಂಡಿದ್ದೇವೆ. ಆಸ್ಪತ್ರೆಯವರು ನಮ್ಮನ್ನು ಹೊರಗಡೆ ತಳ್ಳಿ, ಬಾಗಿಲು ಹಾಕಿದ್ದಾರೆ. ನಾವು ಬಡವರು ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲ. ಪೊಲೀಸರ ಸ್ಥಳಕ್ಕೆ ಬಂದು ಪೋಸ್ಟ್ ಮಾರ್ಟಮ್ ರಿಪೋರ್ಟ್ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ” ಎಂದು ತಿಳಿಸಿದರು.

ವರದಿ: ಗೀತಾ ಹೊಸಮನಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...