ಯಾದಗಿರಿ | ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಎಐಡಿಎಸ್‌ಓ ಆಗ್ರಹ

Date:

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಹಾಗೂ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಓ ಬೃಹತ್ ಪ್ರತಿಭಟನೆ ನಡೆಸಿತು.

ಯಾದಗಿರಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದ ವರೆಗೆ ಬೃಹತ್ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ನಂತರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಗ್ರೇಡ್ 2 ತಹಸೀಲ್ದಾರ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಶಿಲ್ಪಾ ಬಿ.ಕೆ, ಮಾತನಾಡಿ, “ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಈಗಾಗಲೇ ಸರ್ಕಾರದ ಗಮನದಲ್ಲಿದೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಕಾಲ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ, ಮತ್ತೊಂದೆಡೆ ಸೆಮಿಸ್ಟರ್ ಪರಿಕ್ಷೆಗಳ ದಿನಾಂಕ ಸಮೀಪಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಅಮಾನತುಗೊಂಡ 141 ಸಂಸದರಲ್ಲಿ ಕರ್ನಾಟಕದ ನಾಲ್ವರು

ಈ ಸಂದರ್ಭದಲ್ಲಿ ಎಐಡಿಎಸ್‌ಓ ಸಂಘಟನಕಾರರಾದ ವೆಂಕಟೇಶ ದೇವದುರ್ಗ, ವಿದ್ಯಾರ್ಥಿಗಳಾದ ನಂದಿನಿ, ನೇಹಾ, ಲಕ್ಷ್ಮೀ, ದಿವ್ಯಾ, ಪ್ರಿಯಾಂಕ, ಬಸ್ಸಮ್ಮ, ಭವಾನಿ, ಶಾಲಿಸಿ ಸೇರಿದಂತೆ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...