‘ನೀರು ಕೊಡಿ, ಇಲ್ಲ ಸಾಯಲು ಬಿಡಿ’; ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜೀವಂತ ಸಮಾಧಿಗೆ ಯತ್ನಿಸಿದ ಶಹಾಪುರದ ರೈತರು

Date:

‘ನೀರು ಕೊಡಿ, ಇಲ್ಲವೇ ನಮ್ಮನ್ನು ಸಾಯಲು ಬಿಡಿ’ ಎಂದು ರೈತರು ಜೀವಂತ ಸಮಾಧಿಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.

ನಾರಾಯಣಪುರ ಜಲಾಶಯದ ಎಡದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಶಹಾಪುರದ ಭೀಮರಾಯನಗುಡಿಯಲ್ಲಿರುವ ಕೆಬಿಜೆಎನ್‌ಎಲ್‌ ಆಡಳಿತ ಕಚೇರಿ ಎದುರು ರೈತರು ಕಳೆದ 21 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆದರೆ, ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ, ಬೇಸತ್ತ ರೈತರು ಗುರುವಾರ ಬೃಹತ್ ಗುಂಡಿ ತೋಡಿ, ಅದರೊಳಗೆ ಕುಳಿತು ಸಾಮೂಹಿಕವಾಗಿ ಜೀವಂತ ಸಮಾಧಿಗೆ ಯತ್ನಿಸಿದ್ದಾರೆ. ಅವರನ್ನು ಅಧಿಕಾರಿಗಳು ತಡೆಯುವಲ್ಲಿ, ಮತ್ತೊಬ್ಬ ರೈತ ಕಚೇರಿಯ 4ನೇ ಮಹಡಿಗೆ ಏರಿ, ಅಲ್ಲಿಂದ ಬೀಳಲು ಯತ್ನಿಸಿದ್ದಾರೆ. ಅದರ ಬೆನ್ನಲ್ಲೇ ಇನ್ನೋರ್ವ ರೈತ ವಿಷದ ಬಾಟಲಿ ಹಿಡಿದು ವಿಷ ಕುಡಿಯಲು ಯತ್ನಿಸಿದ್ದಾರೆ.

ನಾಲೆಗೆ ನೀರು ಹರಿಸದ ಪರಿಣಾಮ, ರೈತರು ಬೆಳೆದಿರುವ ಮೆಣಸಿನಕಾಯಿ ನೀರಿಲ್ಲದೆ ಒಣಗುತ್ತಿದೆ. ರೈತರು ನಷ್ಟಕ್ಕೆ ಸಿಲುಕಿದ್ದಾರೆ. ಆದರೂ, ಅಧಿಕಾರಿಗಳು ರೈತರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಧರಣಿನಿರತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತುರ್ತುಸಭೆಯಲ್ಲಿ ಕಾಲುವೆಗೆ ನೀರು ಹರಿಸಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ಹತಾಶೆಗೊಂಡ ರೈತರು, ನೀರು ಕೊಡದಿದ್ದರೆ ಬೃಹತ್ ಗುಂಡಿಯಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನಮ್ಮ ಮೇಲೆ ಮಣ್ಣು ಹಾಕಿ ಎಂದು ಗುಂಡಿಯಲ್ಲಿ ಕುಳಿತು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಡಿವೈಎಸ್‌ಪಿ ಜಾವೀದ್‌ ಇನಾಂದಾರ್‌ ಹಾಗೂ ತಹಸೀಲ್ದಾರ್‌ ಉಮಾಕಾಂತ ಹಳ್ಳೆ ತೆರಳಿ ರೈತರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಕಾಲುವೆಗೆ ನೀರು ಹರಿಸುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಬಂದ ಎಸ್‌ಪಿ ಜಿ ಸಂಗೀತಾ ರೈತರನ್ನು ಗುಂಡಿಯಿಂದ ಮೇಲೇಳುವಂತೆ ಮನವಿ ಮಾಡಿದ್ದು, ಶಾಂತಿಯುತ ಧರಣಿ ನಡೆಸುವಂತೆ ತಿಳಿಸಿದ್ದಾರೆ.

ಗುಂಡಿಯಿಂದ ಹೊರಬಂದಿರುವ ರೈತರು ಧರಣಿ ಮುಂದುವರೆಸಿದ್ದಾರೆ. ಧರಣಿಯಲ್ಲಿ ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ, ನಾಗರತ್ನ ಮಾಲಿಪಾಟೀಲ, ಮಹೇಶಗೌಡ ಸುಬೇದಾರ ಸೇರಿದಂತೆ ನೂರಾರು ರೈತರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...