ಯಾದಗಿರಿ | ಅಂಬೇಡ್ಕರ್ ಧ್ವಜಸ್ತಂಭ ತೆರವುಗೊಳಿಸದಂತೆ ಆಗ್ರಹ

Date:

ವಡಗೇರಾ ಗ್ರಾಮದಲ್ಲಿ ಅಳವಡಿಸಿರುವ ಅಂಬೇಡ್ಕರ್ ಧ್ವಜಸ್ತಂಭಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದು ಸರಿಯಲ್ಲ. ಆ ಧ್ವಜಸ್ತಂಭವನ್ನು ತೆರವುಗೊಳಿಸುವುದಾದೆ, ಗ್ರಾಮದಲ್ಲಿ ಹಾಕಿರುವ ಎಲ್ಲ ಸಂಘಟನೆಗಳ ನಾಮಫಲಕ ಮತ್ತು ಧ್ವಜಸ್ತಂಭಗಳನ್ನು ತೆರವುಗೊಳಿಸಬೇಕು ಎಂದು ಭೀರ್ಮ್‌ ಆರ್ಮಿ ಹೇಳಿದೆ.

ಸಂಘಟನೆಯ ಮುಖಂಡರು ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ತಾಲೂಕಿನ ವಡಗೇರಾ ಗ್ರಾಮದಲ್ಲಿ ಕುರಕುಂದಾಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಹಾ ಮಾನವಾತವಾದಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಧ್ವಜಸ್ತಂಭವನ್ನು ಭೀಮ್‌ ಆರ್ಮಿ ಅಳವಡಿಸಿದೆ. ಆದರೆ, ಇದಕ್ಕೆ ಕೆಲವು ಕಿಡಿಗೇಡಿಗಳು ವಿನಾಕಾರಣ ತಕರಾರು ತೆಗೆದಿದ್ದಾರೆ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಾವು ಅಳವಡಿಸಿದ ಧ್ವಜಸ್ತಂಭ ತೆರವುಗೊಳಿಸುವುದಾದರೆ, ವಡಗೇರಾದಲ್ಲಿ ಅನಧಿಕೃತವಾಗಿ ಹಾಕಲಾಗಿರುವ ಎಲ್ಲ ಸಂಘಟನೆಗಳ ನಾಮಫಲಕ ಮತ್ತು ಧ್ವಜ ಸ್ತಂಭ ತೆರವುಗೊಳಿಸಬೇಕು. ಸಾಮಾಜಿಕ ನ್ಯಾಯ ಕಲ್ಪಿಸಿ ಕೊಡಬೇಕು. ಕೇವಲ ನಮ್ಮ ಧ್ವಜಸ್ತಂಭ ತೆರವಿಗೆ ಮುಂದಾಗಬಾರದು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಧ್ವಜಸ್ತಂಭ ತೆರವುಗೊಳಿಸಲು ಮುಂದಾದರೆ, ತಾಲೂಕು ಕಚೇರಿ ಎದುರು ನಾವು ನಿರಂತರ ಧರಣಿ ಸತ್ಯಾಗ್ರಹ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸೈದಪ್ಪ ಎಮ್ ಕಣಜಕರ್, ಶರಣ್ ಎಸ್ ಗೊಂದನವರ್, ಮೌಲಾಲಿ, ಕಲಪ್ಪ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...