ಯಾದಗಿರಿ | ಬಸವಣ್ಣನ ಚಿಂತನೆಗಳಿಂದ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ : ವಿಶ್ವಾರಾಧ್ಯ ಸತ್ಯಂಪೇಟೆ

Date:

ಹನ್ನೆರಡನೆಯ ಶತಮಾನದ ಬಸವಣ್ಣನವರ ಚಿಂತನೆಗಳಿಂದ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಬಸವಮಾರ್ಗ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಅವರು ಹೇಳಿದರು.

ಶಹಾಪುರ ತಾಲೂಕಿನ ಸಗರ ಗ್ರಾಮದ ಸುಬೇದಾರ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ‘ಶಾಲೆಯಿಂದ ಶಾಲೆಗೆ ಸಾಂಸ್ಕೃತಿಕ ನಾಯಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಮನುಷ್ಯನು ಹುಟ್ಟುವ ಮೊದಲು ವಿಶ್ವಮಾನವ; ನಂತರ ಜಾತಿ ಮತ್ತು ಧರ್ಮಗಳಲ್ಲಿ ಸಿಲುಕಿಸಲಾಗುತ್ತದೆ ಎಂಬ ಬಸವಣ್ಣರ ಚಿಂತನೆ ಇಂದಿಗೂ ಪ್ರಸ್ತುತವಾಗಿದೆ’ ಎಂದು ತಿಳಿಸಿದರು.

‘ಬಸವಣ್ಣರು ಬಾಲ್ಯದಲ್ಲಿಯೇ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಿದ್ದರು. ಅವರ ಪ್ರಶ್ನೆಗಳನ್ನು ಸಹಿಸಲಾರಿದ ಪಟ್ಟಭದ್ರರು ಅವರನ್ನು ಊರು ಮತ್ತು ಮನೆಯಿಂದ ಬಹಿಷ್ಕರಿಸಿದರು. ತಮ್ಮ ಅಕ್ಕ ಅಕ್ಕನಾಗಮ್ಮಳಿಗೆ ಇಲ್ಲದ ಧಾರ್ಮಿಕ ಸ್ವಾತಂತ್ರ್ಯ ನನಗೂ ಬೇಡವೆಂದು ಹೇಳುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೆ ನಾಂದಿ ಹಾಡಿದರು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬಸವಣ್ಣರಿಗಿಂತ ಪೂರ್ವದಲ್ಲಿ ಸಮಾಜದಲ್ಲಿ ಕಂದಾಚಾರಗಳು ಮತ್ತು ಮೂಢನಂಬಿಕೆಗಳು ಆಳವಾಗಿ ಬೇರುಬಿಟ್ಟಿದ್ದವು. ಅವುಗಳನ್ನು ಪ್ರಶ್ನಿಸಿ ವಚನಗಳ ಮೂಲಕ ಸಮಾಜ ಸುಧಾರಣೆಗೆ ಅವರು ಮುಂದಾದರು. ಸರ್ವರಲ್ಲಿಯೂ ದೇವರಿದ್ದಾನೆ, ನಾವು ಎಲ್ಲರೂ ನಡೆಯುವ ದೇವರುಗಳು ಎಂಬ ಪ್ರಜ್ಞೆಯನ್ನು ಸಮಾಜದಲ್ಲಿ ಬಿತ್ತಿದರು’ ಎಂದು ಹೇಳಿದರು.

ಹೆಣ್ಣು ಕೀಳಲ್ಲ, ಗಂಡು ಶ್ರೇಷ್ಠನಲ್ಲ ಎಂಬ ಸಮಾನತೆಯ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಚಿಂತಕ ಬಸವಣ್ಣರು. ವಿದ್ಯೆಯಿಂದ ಜ್ಞಾನವಂತನಾಗಬಹುದು, ದುಡಿಯುವ ಮೂಲಕ ಶ್ರೀಮಂತನಾಗಬಹುದು ಎಂಬ ಸರಳ ಸತ್ಯವನ್ನು ಅವರು ಪ್ರತಿಪಾದಿಸಿದರು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರಾಂಶುಪಾಲ ದತ್ತಾತ್ರೇಯ ಕುಲ್ಕರ್ಣಿ ಅವರು ಮಾತನಾಡಿ, ‘ಪ್ರಶ್ನೆಗಳು ವ್ಯಕ್ತಿಯನ್ನೂ ಸಮಾಜವನ್ನೂ ಬೆಳಸುತ್ತವೆ. ಬಸವಾದಿ ಶರಣರ ಚಿಂತನೆಗಳನ್ನು ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಶಿಕ್ಷಕರು ಫಲಿತಾಂಶ ಸುಧಾರಣೆಗೆ ಕ್ರಿಯಾಯೋಜನೆ ರೂಪಿಸಲಿ: ಈರಣ್ಣ ಕನ್ನಳ್ಳಿ

ಕಾರ್ಯಕ್ರಮವನ್ನು ಶಿಕ್ಷಕ ಸುದೀರ ಆಸ್ಪಲ್ಲಿ ಸ್ವಾಗತಿಸಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕರಣ ಸುಬೇದಾರ ಅಧ್ಯಕ್ಷತೆ ವಹಿಸಿದ್ದರು. ಶಿವಕುಮಾರ ಅಕ್ಕಿ, ಪ್ರಿಯಾಂಕ ಚವ್ಹಾಣ, ವೇದಾ ನಾಯಕ, ಸುನೀಲ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...