ಯಾದಗಿರಿ | ಭೀಮ್‌ ಆರ್ಮಿ ಶಹಾಪುರ ತಾಲೂಕು ಸಮಿತಿ ರಚನಾ ಸಭೆ

Date:

ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕೋಮುವಾದಿ, ಜಾತಿವಾದಿಗಳನ್ನು ಹಿಮ್ಮೆಟ್ಟಬೇಕು. ತಳಮಟ್ಟದ ಸಮುದಾಯದ ವರ್ಗದವರ ಹಿತಕ್ಕಾಗಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರು, ಕೃಷಿ ಕಾರ್ಮಿಕರು ದನಿ ಎತ್ತಬೇಕು. ಆಗ ಮಾತ್ರ ಶೋಷಿತ ಸಮುದಾಯ ಆರ್ಥಿಕವಾಗಿ, ಧಾರ್ಮಿಕವಾಗಿ, ರಾಜಕೀಯವಾಗಿ ಸಮಾಜದ ಮುನ್ನೆಲೆಗೆ ಬರಲು ಸಾಧ್ಯ ಎಂದು ಭೀಮ್‌ ಆರ್ಮಿ ಭಾರತ್ ಏಕ್ತಾ ಮಿಷನ್‌ನ ಯಾದಗಿರಿ ಉಸ್ತುವಾರಿ ಶರಣರೆಡ್ಡಿ ಹತ್ತಿಗೂಡುರ್ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಸಂಘಟನೆಯ ತಾಲೂಕು ಸಮಿತಿ ರಚನೆ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲಾದ್ಯಂತ ಭೀಮ ಆರ್ಮಿಸಂಘಟನೆ ಬಲಪಡಿಸಬೇಕು. ಎಲ್ಲರೂ ಒಗ್ಗಟ್ಟಾಗಿ ಸಮಾಜದ ಏಳಿಗೆಗಾಗಿ ಅಸ್ಪೃಶ್ಯತೆ, ಮೂಢನಂಬಿಕೆ, ಸಾಮಾಜಿಕ ಬಹಿಷ್ಕಾರ ವಿರುದ್ಧ ಹೋರಾಟ ಮಾಡಬೇಕು” ಎಂದರು.

“ಯುವಜನರು ಬುದ್ಧ, ಬಸವ, ಅಂಬೇಡ್ಕರ್ ಅವರ ಸಿದ್ಧಾಂತವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ನಾವು ಬಲಿಷ್ಠವಾಗಲು ಸಾಧ್ಯ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ದಲಿತರು ಮೇಲೆ ದಬ್ಬಳಿಕೆ, ದೌರ್ಜನ್ಯ, ಸಾಮಾಜಿಕ ಬಹಿಷ್ಕಾರಗಳು ನಡೆಯುತ್ತಲೇ ಇವೆ. ಅವುಗಳನ್ನು ತಡೆಗಟ್ಟುವಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ನಾವು ಒಗ್ಗಟ್ಟಾಗಿ ಹೋರಾಟ ಮಾಡಿ ಸರ್ಕಾರದ ಸೌಲಭ್ಯಗಳು ರಾಜಕೀಯ ಅಧಿಕಾರ ಪಡೆಯಬೇಕಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಸಂಘಟನೆಯ ಶಹಾಪುರ ತಾಲೂಕು ಅಧ್ಯಕ್ಷರಾಗಿ ಭೀಮರಾಯ ಜನ್ನ ಮದ್ರಿಕಿ, ತಾಲೂಕು ಉಸ್ತುವಾರಿಯಾಗಿ ಬಸಲಿಂಗ ಶಿರವಾಳ, ಉಪಾಧ್ಯಕ್ಷರಾಗಿ ಸುನಿಲ ರಾಥೋಡ, ಸಮಿತಿ ಸದಸ್ಯರಾಗಿ ಅಂಬರೀಷ್ ದೋರನಹಳ್ಳಿ, ಸುಭಾಷ್ ರಸ್ತಾಪುರ್, ಮಡಿವಾಳಪ್ಪ ಅಣಬಿ, ಸಿದ್ಧಾರ್ಥ ಹುಲ್ಕಲ್ ಆಯ್ಕೆಯಾದರು.

ಈ ಸಂದರ್ಭದಲ್ಲಿ ರಾಜು ಅಣಬಿ, ಪ್ರಭು ಬುಕ್ಕಲ್, ಶರಣ ರೆಡ್ಡಿ ಹತ್ತಿಗೂಡುರ್, ಮಾನಪ್ಪ ರಸ್ತಪುರ್, ಬಸ್ಸು ನಟೇಕರ್, ಪರಶುರಾಮ್ ಚಲವಾದಿ, ಶಿವಕುಮಾರ್ ಬೀರ್ನೂರ್, ಅಂಬರೀಷ್ ಅಣಬಿ, ಮಾರುತಿ ದೋರಳ್ಳಿ, ಮಲ್ಲಿಕಾರ್ಜುನ್ ದೇವನಹಳ್ಳಿ, ಮಲ್ಲಿನಾಥ್ ಬಡಿಗೇರ, ದವಲ ಸಾಬ್ ದೋರನಹಳ್ಳಿ, ಹನುಮಂತ ಹಾಲಬಾವಿ, ಶಿವಮಾನಪ್ಪ ಹಾಲಬಾವಿ, ಶಮ್ಮು ರಸಾಪುರ್, ಮಮ್ಮದ್ ರಸ್ತಾಪುರ್, ಅಕ್ಬರ್ ರಸ್ತಾಪುರ್, ಮರಲಿಂಗಪ್ಪ ಘಂಟಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...