ಯಾದಗಿರಿ | ಭೂಮಿ, ನಿವೇಶನಕ್ಕಾಗಿ ತಮಟೆ ಘರ್ಜನೆ: ಬೇಡಿಕೆ ಈಡೇರಿಸದಿದ್ದರೆ ನಿರಂತರ ಸಂಘರ್ಷದ ಖಡಕ್ ಎಚ್ಚರಿಕೆ!

Date:

ಭೂಮಿ, ವಸತಿ ನಿವೇಶನ, ಸ್ಮಶಾನ ಭೂಮಿ ಹಾಗೂ ಭೂ ಒಡೆತನ ಯೋಜನೆಗಳನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಹಾಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನೂರಾರು ಮಹಿಳೆಯರು ತಮಟೆ ಬಾರಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ಕರೆಯಬೇಕು ಹಾಗೂ ಭೂಮಿ ಇಲ್ಲದ ದಲಿತ ಬಡ ಕುಟುಂಬಗಳಿಗೆ ತಕ್ಷಣ ನಿವೇಶನ, ಭೂ ಹಂಚಿಕೆ ಮತ್ತು ಸ್ಮಶಾನ ಭೂಮಿ ಮೀಸಲು ಮಾಡಬೇಕು ಎಂದು ಒತ್ತಾಯಿಸಿದರು. ಬಳಿಕ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪೂರ ಅವರಿಗೆ ಮನವಿ ಸಲ್ಲಿಸಿದರು.

1552183

ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷ ಶರಣ ರೆಡ್ಡಿ ಮಾತನಾಡಿ, ‘ನಿವೇಶನ ವಂಚಿತರಿಗೆ ವಸತಿ ಸೌಲಭ್ಯ ಒದಗಿಸಬೇಕು. ಭೂಮಿ ಇಲ್ಲದವರಿಗೆ ಭೂ ಹಂಚಿಕೆ ಮಾಡಬೇಕು ಹಾಗೂ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು ಅವರು ‘ಹತ್ತಿಗುಡೂರ, ಕೊಂಗೊಂಡಿ, ಯಕ್ಷಿಂತಿ, ಅನವಾರ, ಹಯ್ಯಾಳ ಕೆ, ಮಾಲಹಳ್ಳಿ, ತುಮಕೂರು, ಬೊಮ್ಮನಹಳ್ಳಿ, ಐಕೂರ, ಸಲದಪೂರ ಸೇರಿದಂತೆ ವಿವಿಧ ಗ್ರಾಮಗಳ ದಲಿತ ಬಡ ಕುಟುಂಬಗಳಿಗೆ ತಕ್ಷಣ ಸೌಲಭ್ಯ ಒದಗಿಸಬೇಕು,’ ಎಂದು ಆಗ್ರಹಿಸಿದರು. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮೂಲಭೂತ ಹಕ್ಕುಗಳಿಗಾಗಿ ಹೋರಾಟವನ್ನು ನಿರಂತರವಾಗಿ ಮುಂದುವರಿಸುತ್ತೇವೆ,’ ಎಂದು ಎಚ್ಚರಿಕೆ ನೀಡಿದರು.

1552181 1

ಮನವಿ ಸ್ವೀಕರಿಸಿದ ಸಚಿವರು, ಸಂಘಟನೆಯ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ‘ಪ್ರಬುದ್ಧ ಅಕಾಡೆಮಿ’: ಉದ್ಘಾಟನೆಗೊಂಡು ಎರಡು ತಿಂಗಳಲ್ಲೇ ಉದುರಿ ಬಿದ್ದ ಚಾವಣಿಯ ಸಿಮೆಂಟ್ ಪದರು

ಪ್ರತಿಭಟನೆಯಲ್ಲಿ ಶರಣಪ್ಪ ಚಲುವಾದಿ, ನಿಂಗಣ್ಣ ಕರಡಿ, ಸಿದ್ದಪ್ಪ ಚಲುವಾದಿ, ಮಲ್ಲಣ್ಣ ರೆಡ್ಡಿ, ಸಿದ್ದಪ್ಪ ಹೊಸಮನಿ, ರಾಮಪ್ಪ ಮಾಲಹಳ್ಳಿ, ಸಾಬಣ್ಣ ಮಾಲಹಳ್ಳಿ, ಯಲ್ಲಮ್ಮ ರಸ್ತಾಪೂರ, ಶಿವಮ್ಮ ಹತ್ತಿಗುಡೂರ, ಮಲ್ಲಮ್ಮ ಹತ್ತಿಗುಡೂರ, ತಂಗಮ್ಮ ಹತ್ತಿಗುಡೂರ, ಜೇಜಮ್ಮ ಚಲುವಾದಿ, ಮಲ್ಲಮ್ಮ ಕೊಂಗೊಂಡಿ, ಲಕ್ಷ್ಮಿ ಹೊಸಮನಿ, ಮರೆಮ್ಮ ಹೊಸಮನಿ, ಮಲ್ಲಮ್ಮ ಸತ್ಯಂಪೇಟೆ, ಮಲ್ಲಮ್ಮ ಕರಡಿ, ಲಕ್ಷ್ಮಿ ತಳವಾರ, ನಿಂಗಮ್ಮ ಗುರಸಣಗಿ, ಮಹಾದೇವಮ್ಮ ಅನಸೂರ, ದ್ಯಾವಮ್ಮ ಚಲುವಾದಿ ಸೇರಿದಂತೆ ನೂರಾರು ಮಹಿಳೆಯರು, ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...