2025–26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 (ತಿದ್ದುಪಡಿ–2016) ಕುರಿತು ಕಾನೂನು ಅರಿವು ಹಾಗೂ ನೆರವು ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಕೋಳೂರು ಗ್ರಾಮದ ಗ್ರಾಮ ಪಂಚಾಯತ್ ಸಮೀಪದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ರಿಯಾಜ್ ಪಟೇಲ್ ಅವರು ಮಾತನಾಡಿ, ‘ಮಕ್ಕಳನ್ನು ಶಾಲೆಗೆ ಕಳುಹಿಸದೆ ಕೂಲಿ ಕೆಲಸಕ್ಕೆ ಕಳುಹಿಸುವುದು ಕಾನೂನುಬಾಹಿರವಾಗಿದ್ದು, ಇದು ಮಕ್ಕಳ ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಹಾಗೂ 2016ರ ತಿದ್ದುಪಡಿ ಕಾಯ್ದೆಯ ಬಗ್ಗೆ ಮಕ್ಕಳಿಗೂ ಹಾಗೂ ಪೋಷಕರಿಗೂ ಸವಿಸ್ತಾರವಾಗಿ ಮಾಹಿತಿ’ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಣ್ಣ ಕರ್ದಳ್ಳಿ, ಮುಖ್ಯಗುರು ಶಾಂತಗೌಡ ಮಾಲಿ ಪಾಟೀಲ್, ಕಾರ್ಮಿಕ ನಿರೀಕ್ಷಕಿ ಸಬೇರಾ ಬೇಗಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮಿತಾ ಪಾಟೀಲ್, ಉಪಾಧ್ಯಕ್ಷ ಮಹಾದೇವಪ್ಪ, ಎಎಸ್‌ಐ ಗೋಪಾಲ್, ಸಿಪಿಸಿ ನಾಗರಾಜ್, ರೇಣುಕಾ, ಈರಮ್ಮ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಮಿಕಾಯಿಲ್, ಸಿದ್ದಮ್ಮ ಮತ್ತು ಮೇನಕ ಉಪಸ್ಥಿತರಿದ್ದರು.
ಇದನ್ನು ಓದಿದ್ದೀರಾ? ಕಲಬುರಗಿ | ಹೋಳಿ ವೇಳೆ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಆರೋಪ: ಪ್ರಕರಣ ದಾಖಲು
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿ ಮಕ್ಕಳ ಶಿಕ್ಷಣ ಮತ್ತು ಭವಿಷ್ಯ ನಿರ್ಮಾಣದ ಕುರಿತು ಮಾರ್ಗದರ್ಶನ ಪಡೆದರು. ಕಾರ್ಯಕ್ರಮವನ್ನು ಮೋಹನ್ ಕುಮಾರ್ ನಿರೂಪಿಸಿ, ಮಾರ್ಟಿನ್ ಶಾಂತಕುಮಾರ್ ವಂದನಾರ್ಪಣೆ ಮಾಡಿದರು.





