ಯಾದಗಿರಿ | ಹಾಸ್ಟೆಲ್‌ಗಿಲ್ಲ ವಿದ್ಯುತ್‌ ಬೆಳಕು; ಭಯದಲ್ಲೇ ರಾತ್ರಿ ಕಳೆವ ವಿದ್ಯಾರ್ಥಿಗಳು

Date:

ಯಾದಗಿರಿ ತಾಲೂಕಿನ ಲಿಂಗೇರಿ ಗ್ರಾಮದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲವಾರು ಸಮಸ್ಯೆಗಳಿವೆ. ಹಾಸ್ಟೆಲ್‌ಗೆ ವಿದ್ಯುತ್‌ ಸಂಪರ್ಕವೂ ಇಲ್ಲದೆ ವಿದ್ಯಾರ್ಥಿಗಳು ರಾತ್ರಿ ವೇಳೆ ಕತ್ತಲೆಯಲ್ಲಿ ಭಯದಲ್ಲಿಯೇ ಮಲಗುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ.

ಹಾಸ್ಟೆಲ್‌ಗೆ ಮಂಗಳವಾರ ಭೇಟಿ ನೀಡಿದ್ದ ಅವರು, “ಕೆಲವು ಪಾಲಕರು ತಮಗೆ ದೂರವಾಣಿಯಲ್ಲಿ ಸಂಪರ್ಕಿಸಿ ಸಮಸ್ಯೆ ಹೇಳಿಕೊಂಡಿದ್ದಾರೆ. ಹಾಸ್ಟೆಲ್‌ನಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಆದರೂ, ವಾರ್ಡನ್ ಆಗಲೀ, ಸಂದಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲೀ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಹಾಸ್ಟೆಲ್‌ಗೆ ಬರುವ ಅನುದಾನ ಎಲ್ಲಿಗೆ ಯಾರ ಜೇಬಿಗೆ, ಟಿಜೋರಿಗೆ ಸೇರಿತು ಎಂಬುದನ್ನು ಬಯಲುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಹಾಸ್ಟೆಲ್‌ನಲ್ಲಿ ಊಟದ ತಟ್ಟೆಗಳಿಲ್ಲ, ಚಹಾ ಲೋಟಗಳಿಲ್ಲ. ವೈದ್ಯಕೀಯ ತಪಾಸಣೆ ಇಲ್ಲ, ಶೌಚಾಲಯ ಸ್ವಚ್ಛತೆ ಇಲ್ಲ, ಚೆಂಬು ಇಲ್ಲ, ಬಕಿಟ್ ಇಲ್ಲ, ಆಟದ ಮೈದಾನ ಇಲ್ಲ, ಸೋಲಾರ್ ವಿದ್ಯುತ್ ಪರಿಕರಗಳು ಹಾಳಾಗಿದ್ದರೂ ರಿಪೇರಿ ಭಾಗ್ಯ ಕಂಡಿಲ್ಲ. ದಿನಪತ್ರಿಕೆಗಳು ಬರುತ್ತಿಲ್ಲ, ಇನ್ವರ್ಟರ್ ಹಾಳಾಗಿಹೋಗಿದೆ. ದುರಸ್ತಿಯಾಗಿಲ್ಲ, ಬಿಸಿನೀರು ಬರುತ್ತಿಲ್ಲ, ಚಟ್ನಿ ಗ್ರೆಡರ್ ಹಾಳಾಗಿದೆ. ಸಿಸಿ ಕೆಮೆರಾ ಹಾಳಾಗಿದೆ. ಲೈಟು, ಫ್ಯಾನ್ ಯಾವುದೂ ಇಲ್ಲ. ವಿಸತಿ ನಿಲಯದ ಊಟದ ಹಾಲ್ ನಲ್ಲಿ ಹಾಕಲಾಗಿರುವ ಎಲ್‌ಇಡಿ ಟಿವಿ ಕೆಟ್ಟು ಹಾಳಾಗಿದ್ದರೂ ದುರಸ್ತಿ ಮಾಡಿಸಿಲ್ಲ, ಕಟ್ಟಡದ ಕಿಟಕಿಗಳ ಗ್ಲಾಸ್ ಮತ್ತು ಮೆಸ್ ಕಿಟಕಿಯ ಜಾಲಿ ಹಾಳಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಸತಿ ನಿಲಯದ ಅವ್ಯವಹಾರ ಬಯಲಾಗಬೇಕಾದರೆ ಜಿಲ್ಲಾ ಪಂಚಾಯಿತಿ ಸಿಇಓ ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಾಲಕರು ಮತ್ತು ಮಕ್ಕಳೊಂದಿಗೆ ಸಭೆ ನಡೆಸಿ ಚರ್ಚಿಸಬೇಕು” ಎಂದು ಹೇಳಿದರು.

“ತಿಂಗಳಿಗೊಮ್ಮೆ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಬೇಕು. ಆದರೆ ಇದುವರೆಗೆ ಎಷ್ಟು ಬಾರಿ ಭೇಟಿ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲ. ಕೇವಲ ವಾರ್ಡನ್‌ಗಳ ಉಸ್ತುವಾರಿಗೆ ಬಿಟ್ಟು, ಸುಮ್ಮನೆ ಕೂರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

“ಮುಂದಿನ ಐದು ದಿನಗಳಲ್ಲಿ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸದಿದ್ದರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...