ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

Date:

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ ಹೊರಟಿದ್ದಾರೆ.

ಇದರಿಂದಾಗಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶೇ60ರಿಂದ 70ರಷ್ಟು ಜನ ಗುಳೆ ಹೋಗುವುದು ಸಾಮಾನ್ಯವಾಗಿದೆ. ಗ್ರಾಮಗಳಲ್ಲಿ ವೃದ್ಧರು, ಮಕ್ಕಳು ಮಾತ್ರವೇ ಉಳಿಯುತ್ತಿದ್ದು, ಗ್ರಾಮಗಳು ಬಿಕೋ ಎನ್ನುತ್ತಿವೆ.

ಸುರಪುರ ಬಸ್ ಡಿಪೊದಿಂದ ಬೆಂಗಳೂರಿಗೆ ನಿತ್ಯ ನಾಲ್ಕು ಬಸ್ ಸಂಚರಿಸುತ್ತವೆ. ಆದರೆ, ಗ್ರಾಮದ ಜನ ಹೀಗೆ ಗುಳೆ ಹೋರಟಿರುವುದರಿಂದ, ಈಗ ಪ್ರತೀ ದಿನ ನಾಲ್ಕು ಬಸ್‍ಗಳನ್ನು ಹೆಚ್ಚುವರಿಯಾಗಿ ಓಡಿಸಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ಇನ್ನಷ್ಟು ಬಸ್‍ಗಳನ್ನು ಬಿಡಲು ಸಿದ್ಧತೆ ನಡೆದಿದೆ ಎಂದು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಪ್ರತೀ ಗ್ರಾಮಗಳಲ್ಲಿ ಕಾರ್ಮಿಕರನ್ನು ಬೆಂಗಳೂರು, ಪುಣೆ, ಮುಂಬೈ ನಗರಗಳಿಗೆ ಬಿಟ್ಟು ಬರಲೆಂದೇ ಕ್ರೂಸರ್ ಜೀಪ್‍ಗಳು ಇವೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಆರೋಗ್ಯ, ಶಿಕ್ಷಣ ಸಮಸ್ಯೆ: ಗುಳೆ ಹೋಗುವ ಕಾರ್ಮಿಕರು ಕಾಮಗಾರಿ ಸ್ಥಳದಲ್ಲೇ ವಾಸಿಸುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆ. ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.

ಗುಳೆ ತಪ್ಪಿಸಲೆಂದೇ ಸರ್ಕಾರ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿದೆ. ಆದರೆ, ಯೋಜನೆಯಡಿ ಸಮರ್ಪಕ ಕೆಲಸ, ಕೂಲಿ ಸಿಗುತ್ತಿಲ್ಲ. ಯೋಜನೆಯ ದುರುಪಯೋಗವೇ ನಡೆದಿದೆ ಎಂಬುದು ಕಾರ್ಮಿಕರ ಆರೋಪ ಮತ್ತು ಅಸಮಾಧಾನ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...