ಯಾದಗಿರಿ | 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕಕ್ಕಸಗೇರಾ ಗ್ರಾಮದಲ್ಲಿ ದಲಿತ ಸಮುದಾಯದ ವತಿಯಿಂದ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಬುಧವಾರ ಶಾಂತಿಯುತವಾಗಿ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ವಕ್ತಾರರು, ‘ಭೀಮಾ ಕೋರೆಗಾಂವ್ ಯುದ್ಧವು ಹಣ, ಆಸ್ತಿ ಅಥವಾ ಸಾಮ್ರಾಜ್ಯ ವಿಸ್ತರಣೆಗೆ ನಡೆದ ಯುದ್ಧವಲ್ಲ. ಮೇಲ್ವರ್ಗದ ದರ್ಪದ ವಿರುದ್ಧವಾಗಿ ಕೆಳವರ್ಗದ ಸ್ವಾಭಿಮಾನಕ್ಕಾಗಿ ನಡೆದ ಮಹಾನ್ ಹೋರಾಟ ಇದಾಗಿದ್ದು, ಶೋಷಿತ ಸಮುದಾಯದ ಆತ್ಮಗೌರವದ ಸಂಕೇತವಾಗಿದೆ ಎಂದು ಹೇಳಿದರು. 1818ರ ಜನವರಿ 1ರಂದು ಇಡೀ ವಿಶ್ವ ಹೊಸ ವರ್ಷದ ಸಂಭ್ರಮದಲ್ಲಿದ್ದಾಗ, ನಮ್ಮ ಪೂರ್ವಜರು ಶೋಷಣೆಯ ವಿರುದ್ಧ ಆಯುಧ ಹಿಡಿದು ಹೋರಾಡಿ ಇತಿಹಾಸ ನಿರ್ಮಿಸಿದ್ದಾರೆ’ ಎಂದು ಸ್ಮರಿಸಿದರು.

‘ಭೀಮಾ ಕೋರೆಗಾಂವ್ ಹೋರಾಟವು ದಲಿತ ವೀರಶೂರರ ತ್ಯಾಗ, ಧೈರ್ಯ ಹಾಗೂ ಆತ್ಮಗೌರವದ ಅಮೋಘ ಉದಾಹರಣೆಯಾಗಿದ್ದು, ಈ ಸತ್ಯ ಇತಿಹಾಸವನ್ನು ಯಾವತ್ತೂ ಮುಚ್ಚಿಡಲು ಸಾಧ್ಯವಿಲ್ಲ. ಶೋಷಿತ ಸಮುದಾಯದ ಸ್ವಾಭಿಮಾನವನ್ನು ಜಗತ್ತಿಗೆ ಸಾರಿದ ಈ ಹೋರಾಟ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿರು ಆಯ್ಕೆ 

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ್ ಅಂಗಡಿ, ಬಾಲಪ್ಪ ಅಮ್ಮಪುರ, ನಿಂಗಪ್ಪ ಕಟ್ಟಿಮನಿ, ಭೀಮಣ್ಣ ಬಿರನೂರ, ಹಣಮಂತ ದೊಡ್ಮನಿ, ನಿಂಗಪ್ಪ ದೊಡ್ಮನಿ, ಹಣಮಂತ ಅಮ್ಮಪುರ, ಭೀಮರಾಯ ವಡಗೇರಾ, ಭೀಮಣ್ಣ ಪಡಸಾಲಿ, ಜೈ ಭೀಮ್ ಬಡಿಗೇರ್, ಬಾಲಪ್ಪ ಎವೂರ್, ಬಸಪ್ಪ ಕರಿಕಲ್, ಅಶೋಕ್ ವಡಗೇರಿ, ನಿಂಗಪ್ಪ ಬಡಿಗೇರ, ಶಶಿಕುಮಾರ್ ದೊಡ್ಮನಿ, ಸುನೀಲ್ ಕುಮಾರ್ ಎವೂರ್, ಮಲ್ಲು ಅಂಗಡಿ, ಸುದೀಪ್ ಬಡಿಗೇರ್, ನಿಂಗಪ್ಪ ಗುಂಡಕನಾಳ ಸೇರಿದಂತೆ ಅನೇಕ ದಲಿತ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...