ಸಾರ್ವಜನಿಕ ಸಂಚಾರ ಸೌಲಭ್ಯವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಯಾದಗಿರಿ ನಗರದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 3 ಹೊಸ ಬಸ್‌ಗಳನ್ನು ಸೇವೆಗೆ ಸಮರ್ಪಿಸಲಾಯಿತು.
ನಗರದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಕಲ್ಯಾಣ ಕರ್ನಾಟಕ ಸಾರಿಗೆ ನೂತನ ಮೂರು ಹೊಸ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು.
‘ಕಲ್ಯಾಣ ಕರ್ನಾಟಕ ಸಾರಿಗೆ ಮೂರು ನೂತನ ಹೊಸ ಬಸ್‌ಗಳ ಸೇರ್ಪಡೆಯಿಂದ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಒದಗಲಿದೆ ಎಂದು’ ಅವರು ತಿಳಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಪುಸ್ತಕ ನಮ್ಮ ಜ್ಞಾನದ ಬುನಾದಿ, ಅರಿವಿನ ಸಂಕೇತ: ಡಾ. ಮಾನಸ ಅಭಿಮತ
ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.





