ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಹಿನ್ನೆಲೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಬಾಲಕಿಯೊಬ್ಬಳನ್ನು ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿತ್ತು. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ, ಕ್ರಮ ತೆಗೆದುಕೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು.
ಇದನ್ನೂ ಓದಿ : ಬೀದರ್ | ಇಂದು ಪಶು ವಿವಿ 15ನೇ ಘಟಿಕೋತ್ಸವ
ಆಯೋಗದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಯಾದಗಿರಿ ಎಸ್‌ಪಿಗೆ ಕ್ರಮ ತೆಗೆದುಕೊಳ್ಳಲು ಪತ್ರ ಬರೆದಿತ್ತು. ಬಳಿಕ ದೂರು ದಾಖಲಾಗುತ್ತಿದ್ದಂತೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.





