ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಶಾಲೆ ವಿರೋಧಿಸಿ ಸರ್ಕಾರಿ ಶಾಲೆ ಉಳಿಸಲು ಎಐಡಿಎಸ್‌ಒ ಪ್ರತಿಭಟನೆ

Date:

ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ ಗುಡ್ಡದ ಗುರುಲಿಂಗೇಶ್ವರ ಬಡಾವಣೆಯ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಪ್ರಾರಂಭಿಸುವ ಮೂಲಕ ಗ್ರಾಮ ಪಂಚಾಯಿತಿಗೆ ಒಂದೇ ಶಾಲೆ ಆರಂಭಿಸಿ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಕ್ಕಪ್ಪ ಅವರು ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗಲಿದೆ ಎಂದು ಹೇಳಿದರು. ಹಲವು ಮಹಾನ್ ವ್ಯಕ್ತಿಗಳ ಹೋರಾಟದ ಮೂಲಕ ದೇಶದಲ್ಲಿ ಶಿಕ್ಷಣದ ಹಕ್ಕು ಸಿಕ್ಕಿದ್ದು, ಈಗ ಈ ಯೋಜನೆಯ ಮೂಲಕ ಶಿಕ್ಷಣವನ್ನು ಕೆಲವರ ಸ್ವತ್ತಾಗಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1585318

‘ಒಂದೆಡೆ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ, ಇನ್ನೊಂದೆಡೆ ಇಲಾಖೆಯಿಂದ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗುತ್ತಿದೆ ಎಂದು ಅವರು ಟೀಕಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಇರುವ ಕೆಕೆಆರ್‌ಡಿಬಿ ನಿಧಿಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಸ್ಥಾಪನೆಗೆ ಬಳಸುತ್ತಿರುವುದು ಸರಿಯಲ್ಲ. ಈ ನಿಧಿಯನ್ನು ಆಸ್ಪತ್ರೆಗಳು, ಉದ್ಯೋಗ ಸೃಷ್ಟಿ ಹಾಗೂ ಜನರ ಜೀವನಮಟ್ಟ ಸುಧಾರಣೆಗೆ ಬಳಸಬೇಕಾಗಿದೆ’ ಎಂದು ಹೇಳಿದರು.

‘ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳು ಸುಲಭವಾಗಿ ಹೋಗಿ ಬರುವ ವ್ಯವಸ್ಥೆ ಇದೆ. ಆದರೆ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ ದೂರದ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವುದು ಬಡ ಕುಟುಂಬಗಳಿಗೆ ಸಾಧ್ಯವಿಲ್ಲ. ಆದ್ದರಿಂದ ನಮ್ಮೂರಿನ ಸರ್ಕಾರಿ ಶಾಲೆಗಳನ್ನು ಉಳಿಸಬೇಕು’ ಎಂದು ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾಶಾ ಸಾಬ್, ಹಸನ್ ಸಾಬ್, ಅದ್ಬುಲ್ ರಹೀಮ್ ಸಾಬ್, ರಹೀಮ್ ಸಾಬ್, ತಿರುಪತಿ, ಹೊನ್ನಪ್ಪ, ಹಣಮಂತರಾಯ, ಸಿದ್ದಣ್ಣ ಹಳ್ಳಿ, ಮಾಲಮ್ಮ, ಶಿವರಾಜ್, ಸಿದ್ದಣ್ಣ, ಗುರುನಾಥ, ದೇವಿಂದ್ರ, ಭಾಗ್ಯಮ್ಮ ಸೇರಿದಂತೆ ಅನೇಕ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ ಗುಡ್ಡದ ಗುರುಲಿಂಗೇಶ್ವರ ಬಡಾವಣೆಯ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಪ್ರಾರಂಭಿಸುವ ಮೂಲಕ ಗ್ರಾಮ ಪಂಚಾಯಿತಿಗೆ ಒಂದೇ ಶಾಲೆ ಆರಂಭಿಸಿ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಕ್ಕಪ್ಪ ಅವರು ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗಲಿದೆ ಎಂದು ಹೇಳಿದರು. ಹಲವು ಮಹಾನ್ ವ್ಯಕ್ತಿಗಳ ಹೋರಾಟದ ಮೂಲಕ ದೇಶದಲ್ಲಿ ಶಿಕ್ಷಣದ ಹಕ್ಕು ಸಿಕ್ಕಿದ್ದು, ಈಗ ಈ ಯೋಜನೆಯ ಮೂಲಕ ಶಿಕ್ಷಣವನ್ನು ಕೆಲವರ ಸ್ವತ್ತಾಗಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಅವರು ಆರೋಪಿಸಿದರು.

‘ಒಂದೆಡೆ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ, ಇನ್ನೊಂದೆಡೆ ಇಲಾಖೆಯಿಂದ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗುತ್ತಿದೆ ಎಂದು ಅವರು ಟೀಕಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಇರುವ ಕೆಕೆಆರ್‌ಡಿಬಿ ನಿಧಿಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಸ್ಥಾಪನೆಗೆ ಬಳಸುತ್ತಿರುವುದು ಸರಿಯಲ್ಲ. ಈ ನಿಧಿಯನ್ನು ಆಸ್ಪತ್ರೆಗಳು, ಉದ್ಯೋಗ ಸೃಷ್ಟಿ ಹಾಗೂ ಜನರ ಜೀವನಮಟ್ಟ ಸುಧಾರಣೆಗೆ ಬಳಸಬೇಕಾಗಿದೆ’ ಎಂದು ಹೇಳಿದರು.

‘ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳು ಸುಲಭವಾಗಿ ಹೋಗಿ ಬರುವ ವ್ಯವಸ್ಥೆ ಇದೆ. ಆದರೆ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ ದೂರದ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವುದು ಬಡ ಕುಟುಂಬಗಳಿಗೆ ಸಾಧ್ಯವಿಲ್ಲ. ಆದ್ದರಿಂದ ನಮ್ಮೂರಿನ ಸರ್ಕಾರಿ ಶಾಲೆಗಳನ್ನು ಉಳಿಸಬೇಕು’ ಎಂದು ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಶಾಲಾ ವಾಹನ ಡಿಕ್ಕಿ: 8 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಈ ಸಂದರ್ಭದಲ್ಲಿ ಭಾಶಾ ಸಾಬ್, ಹಸನ್ ಸಾಬ್, ಅದ್ಬುಲ್ ರಹೀಮ್ ಸಾಬ್, ರಹೀಮ್ ಸಾಬ್, ತಿರುಪತಿ, ಹೊನ್ನಪ್ಪ, ಹಣಮಂತರಾಯ, ಸಿದ್ದಣ್ಣ ಹಳ್ಳಿ, ಮಾಲಮ್ಮ, ಶಿವರಾಜ್, ಸಿದ್ದಣ್ಣ, ಗುರುನಾಥ, ದೇವಿಂದ್ರ, ಭಾಗ್ಯಮ್ಮ ಸೇರಿದಂತೆ ಅನೇಕ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...