ಯಾದಗಿರಿ | ರಾಜ್ಯ ಬಜೆಟ್‌ನಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಮನವಿ

Date:

ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಿ, ಅದಕ್ಕಾಗಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಒತ್ತಾಯಿಸಿ ಹಾಸ್ಟೆಲ್ ಕಾರ್ಮಿಕರು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದರು ಮುಖಂಡರು ಮಾತನಾಡಿ, ‘ರಾಜ್ಯದಾದ್ಯಂತ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸರ್ಕಾರಿ ಹಾಸ್ಟೆಲ್, ಆಶ್ರಮ ಶಾಲೆ ಮತ್ತು ವಸತಿ ಶಾಲೆ–ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಕಾರ್ಮಿಕರು ಸರ್ಕಾರಿ ಇಲಾಖೆಗಳಲ್ಲೇ ಕೆಲಸ ಮಾಡುತ್ತಿದ್ದರೂ ಕನಿಷ್ಠ ವೇತನ, ಪಿಎಫ್, ರಜೆ ಸೇರಿದಂತೆ ಅನೇಕ ಕಾನೂನುಬದ್ದ ಸೌಲಭ್ಯಗಳನ್ನು ಪಡೆಯಲು ಹರಸಾಹಸ ಪಡಬೇಕಾದ ಸ್ಥಿತಿ ಇದೆ ಎಂದು ಕಾರ್ಮಿಕರು ದೂರಿದರು. ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಕೆಲಸದ ಭದ್ರತೆ ಇಲ್ಲದೆ ದಿನನಿತ್ಯ ಅಭದ್ರತೆಯಲ್ಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಾವಿರಾರು ಕಾರ್ಮಿಕರು ಇದೇ ಕೆಲಸವನ್ನೇ ನಂಬಿ ಬದುಕುತ್ತಿದ್ದು, ಖಾಯಂ ಸ್ವರೂಪದ ಕೆಲಸ ಮಾಡುತ್ತಿದ್ದರೂ ಸರ್ಕಾರ ಇದುವರೆಗೆ ಅವರನ್ನು ಖಾಯಂಗೊಳಿಸಿಲ್ಲ. ಬದಲಾಗಿ ಗುತ್ತಿಗೆದಾರರ ಮೂಲಕ ಹೊಸ ಜೀತ ಪದ್ಧತಿಗೆ ನೂಕಲಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯಗಳ ಆದೇಶಗಳನ್ನು ಉಲ್ಲಂಘಿಸಿ ಕಾರ್ಮಿಕ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ’ ಎಂದು ಹೇಳಿದರು.

‘ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಿ ಎಲ್ಲಾ ಜಿಲ್ಲೆಗಳಲ್ಲಿ ವಿವಿದುದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದರೂ ಅದರ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎಂದು ತಿಳಿಸಿದರು. ಕೆಲ ಜಿಲ್ಲೆಗಳಲ್ಲಿ 2025ರ ಜನವರಿಯಿಂದಲೇ ಸದಸ್ಯತ್ವ ಪಡೆಯಲು ಕಾರ್ಮಿಕರು ಒಂದು ಸಾವಿರ ಪಾವತಿಸಿ ಸದಸ್ಯರಾಗಿದ್ದರೂ ಸಹಕಾರ ಸಂಘಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ’ ಎಂದು ಆರೋಪಿಸಿದರು.

‘ಇದೇ ವೇಳೆ ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನವನ್ನು ₹35,ಸಾವಿರ ವರೆಗೆ ಪರಿಷ್ಕರಿಸುವ ಪ್ರಸ್ತಾವನೆಯನ್ನು ಕಾರ್ಮಿಕ ಇಲಾಖೆ ಸರ್ಕಾರಕ್ಕೆ ಕಳುಹಿಸಿದ್ದರೂ ಈವರೆಗೆ ಅಂತಿಮ ನಿರ್ಧಾರವಾಗಿಲ್ಲ ಎಂದು ಹೇಳಿದರು. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಇದು ದೊಡ್ಡ ನಿರೀಕ್ಷೆಯಾಗಿತ್ತು’ ಎಂದು ತಿಳಿಸಿದರು.

‘ಕಾರ್ಮಿಕರು ಪ್ರತಿ ತಿಂಗಳು ಇಎಸ್‌ಐ ಶುಲ್ಕವನ್ನು ಪಾವತಿಸುತ್ತಿದ್ದರೂ ಅವರಿಗೆ ಸಮರ್ಪಕ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಅನೇಕ ಜಿಲ್ಲೆಗಳಲ್ಲಿ ಡಿಸ್ಪೆನ್ಸರಿ ಮಾತ್ರವಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ನಗರಗಳಿಗೆ ತೆರಳಬೇಕಾದ ಸ್ಥಿತಿ ಇದೆ’ ಎಂದು ದೂರಿದರು.

ಹೀಗಾಗಿ ಹೊರಗುತ್ತಿಗೆ ಕಾರ್ಮಿಕರ ಸಹಕಾರ ಸಂಘವನ್ನು ರಚಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೆ ತರಬೇಕು ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಮಾರ್ಚ್ 5ರಂದು ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ಕಲಬುರಗಿ ದಲಿತರ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ

ಈ ಸಂದರ್ಭದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷೆ ಡಿ. ಉಮಾದೇವಿ, ಸಂಘದ ಜಿಲ್ಲಾ ಅಧ್ಯಕ್ಷ ಶರಣಪ್ಪ ಜಿ. ತೆಳಿಗೇರಿಕರ್, ಜಿಲ್ಲಾ ಉಪಾಧ್ಯಕ್ಷ ತಾಜುದ್ದೀನ್ ಚೌಕಿ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಕಾಂತ್ ಚಿಕ್ಕಮೇಟಿ, ಮೋನಮ್ಮ, ಯಲ್ಲಮ್ಮ ಜಗದೇವಿ, ಹನುಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...