ಯಾದಗಿರಿ | ಬಳ್ಳಾರಿ ಗುಂಪು ಘರ್ಷಣೆ ಪ್ರಕರಣ: ಎಸ್.ಪಿ. ಪವನ್ ನೆಜ್ಜೂರ್ ಅಮಾನತು ಖಂಡಿಸಿ ದಸಂಸ ಮನವಿ

Date:

ಬಳ್ಳಾರಿ ನಗರದಲ್ಲಿ ಜನವರಿ 01, 2026ರಂದು ನಡೆದ ಗುಂಪು ಘರ್ಷಣೆಯ ಹಿನ್ನೆಲೆಯಲ್ಲಿ ಎಸ್.ಪಿ. ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ (ಭೀಮವಾದ) ಯಾದಗಿರಿ ಘಟಕದ ವತಿಯಿಂದ ಶನಿವಾರ ಶಹಾಪುರ ತಹಶೀಲ್ದಾರ್ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಸಂಸ ಭೀಮವಾದ ಮುಖಂಡರು ಮಾತನಾಡಿ, ‘ವಾಲ್ಮೀಕಿ ಮತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರವಾಗಿ ಬಿಜೆಪಿ ಶಾಸಕ ಜನಾರ್ಧನರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಭರತರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಜನಪ್ರತಿನಿಧಿಗಳೇ ರೌಡಿಗಳಂತೆ ವರ್ತಿಸಿದ ಪರಿಣಾಮ ಪರಿಸ್ಥಿತಿ ಉದ್ರಿಕ್ತಗೊಂಡಿತು’ ಎಂದು ಆರೋಪಿಸಿದರು.

‘ಘರ್ಷಣೆಯಲ್ಲಿ ರಾಜಶೇಖರ ಎಂಬ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ಖೇದಕರ ಸಂಗತಿ. ಆದರೆ ಘಟನೆಯಲ್ಲಿ ನೇರ ಹೊಣೆಗಾರರಾದ ಇಬ್ಬರು ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಅಧಿಕಾರ ವಹಿಸಿಕೊಂಡ ಕೇವಲ ಮೂರು ಗಂಟೆಗಳಲ್ಲೇ ನಡೆದ ಘಟನೆಯ ಹೊಣೆಯನ್ನು ಎಸ್.ಪಿ. ಪವನ್ ನೆಜ್ಜೂರ್ ಅವರ ಮೇಲೆ ಹೊರಿಸಿ ಅಮಾನತು ಮಾಡಿರುವುದು ನ್ಯಾಯಸಮ್ಮತವಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಎಸ್.ಪಿ. ಪವನ್ ನೆಜ್ಜೂರ್ ಅವರು ಕರ್ತವ್ಯ ಪಾಲನೆಯಲ್ಲೇ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಶಾಸಕ ಭರತರೆಡ್ಡಿ ಅವರ ಖಾಸಗಿ ಗನ್‌ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ ಕಾನೂನು ಉಲ್ಲಂಘನೆ ಮಾಡಿದ ಕುರಿತು ಸರ್ಕಾರ ಮೌನ ವಹಿಸಿರುವುದು ಆತಂಕಕಾರಿ’ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿರು ಆಯ್ಕೆ 

‘ರಾಜಕೀಯ ದರ್ಪ ಮತ್ತು ಸ್ವಾರ್ಥದ ಕಿತ್ತಾಟದಿಂದ ಒಬ್ಬ ಅಮಾಯಕರ ಜೀವ ಹೋದರೂ, ಅವರ ಕುಟುಂಬಕ್ಕೆ ನ್ಯಾಯ ದೊರಕದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಂಘಟನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಸ್.ಪಿ. ಪವನ್ ನೆಜ್ಜೂರ್ ಅವರ ಅಮಾನತು ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕು, ಘಟನೆಯಲ್ಲಿ ನೇರ ಹೊಣೆಗಾರರಾದ ಶಾಸಕ ಜನಾರ್ಧನರೆಡ್ಡಿ ಹಾಗೂ ಶಾಸಕ ಭರತರೆಡ್ಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತ ರಾಜಶೇಖರ ಅವರ ಕುಟುಂಬಕ್ಕೆ ನ್ಯಾಯಸಮ್ಮತ ಪರಿಹಾರ ಒದಗಿಸಬೇಕು’ ಎಂದ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ವಿಶ್ವನಾಟೇಕಾರ್, ಜಿಲ್ಲಾ ಉಸ್ತುವಾರಿ ಶರಣು ದೊರನಹಳ್ಳಿ, ಜಿಲ್ಲಾ ಸಹ ಸಂಚಾಲಕ ಬಸವರಾಜ ಚಿಪ್ಪಾರ್, ರಾಜ್ಯ ಸಮಿತಿ ಸದಸ್ಯ ಶಿವು ಪೋತೆ, ಜಿಲ್ಲಾ ಸಹ ಸಂಚಾಲಕ ಸಂತೋಷ ಗೋಗಿ, ತಾಲ್ಲೂಕು ಸಹ ಸಂಚಾಲಕ ಶರಣು ಹುರುಸಗುಂಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...