ಯಾದಗಿರಿ | ಭಗತ್‌ ಸಿಂಗ್‌ ಜನ್ಮದಿನಾಚರಣೆ

Date:

ಭಗತ್ ಸಿಂಗ್ ಅವರ ರಾಜಿರಹಿತ ಹೋರಾಟ, ಜ್ಞಾನದಾಹ ಯುವಜನರಿಗೆ ಮಾದರಿಯಾಗಿದೆ ಎಂದು ಎಐಡಿವೈಒ ರಾಜ್ಯ ಉಪಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಯಾದಗಿರಿಯ ಜವಾಹರ್ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಮಹಾನ್ ಕ್ರಾಂತಿಕಾರಿ ಶಹೀದ್ ಭಗತ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಅತ್ಯಂತ ಚಿಕ್ಕ ವಯಸ್ಸಿನಲ್ಲಿ ನಗುನಗುತ್ತಾ ಗಲ್ಲಿಗೆ ಏರಿದ ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ. ಭಗತ್ ಸಿಂಗ್ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಾಗಿಡುವ ನಿರ್ಧಾರ ಕೈಗೊಂಡರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಗತ್ ಅವರ ತಂದೆ 16ನೇ ವಯಸ್ಸಿನಲ್ಲಿ‌ ಅವರ ಮದುವೆ ಮಾಡಲು ಪ್ರಯತ್ನಿಸಿದರು. ಅದರಿಂದ ತಪ್ಪಿಸಿಕೊಂಡು ಮನೆಯನ್ನು ಮತ್ತು ತಮ್ಮ ಶಾಲಾ ಶಿಕ್ಷಣವನ್ನು ತ್ಯಜಿಸಿದರು. ಅತ್ಯಂತ ಜ್ಞಾನದಾಹಿಯಾಗಿದ್ದ ಅವರು ದೇಶ ವಿದೇಶದ ಇತಿಹಾಸ, ತತ್ವಶಾಸ್ತ್ರ, ವಿಜ್ಞಾನ, ಸಾಹಿತ್ಯವನ್ನು ಅಧ್ಯಯನವನ್ನು ಆಳವಾಗಿ ನಡೆಸಿದರು. ಕೊನೆಗೆ ಗಲ್ಲಿಗೆ ಹಾಕುವ ದಿನವೂ ಸಹಿತ ಮಹಾನ್ ಕ್ರಾಂತಿಕಾರಿ ನಾಯಕ, ರಷ್ಯಾದ ಕ್ರಾಂತಿಯ ಶಿಲ್ಪಿ ಲೆನಿನ್ ಅವರ ಜೀವನ ಚರಿತ್ರೆಯನ್ನು ಓದುತ್ತಿದ್ದರು. ತಮ್ಮ ಜೀವನದ ಕೊನೆಯವರೆಗೂ ಬ್ರಿಟಿಷರ ವಿರುದ್ಧ ರಾಜಿ ರಹಿತ ಹೋರಾಟ ನಡೆಸಿದರು” ಎಂದರು.

“ದೇಶಕ್ಕೆ ಸ್ವಾತಂತ್ರ್ಯ ಪಡೆದರೆ ಸಾಲದು. ಮಾನವನಿಂದ ಮಾನವನಿಗೆ ಉಂಟಾಗುತ್ತಿರುವ ಶೋಷಣೆಗೆ ಕೊನೆ ಹಾಡಬೇಕು. ಹಾಗಾದರೆ ಮಾತ್ರ ದೇಶದ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೆಂದು ಮನಗಂಡಿದ್ದರು. ಅದಕ್ಕಾಗಿ ಎಚ್‌ಆರ್‌ಎ ಎಂಬ ಸಂಘಟನೆಗೆ ಮರುನಾಮಕರಣ ಮಾಡಿ ಅದಕ್ಕೆ ಹಿಂದೂಸ್ತಾನ್ ಸೋಷಲಿಸ್ಟ್ ರಿಪಬ್ಲಿಕನ್ ಅಸೋಸಿಯೇಷನ್ ಎಂದು ಕರೆದರು” ಎಂದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ಶಾಶ್ವತ ಪರಿಹಾರಕ್ಕೆ ಸುತ್ತೂರು ಸ್ವಾಮೀಜಿ ಸಲಹೆ

“ಜೈಲಿನಲ್ಲಿದ್ದಾಗ ಅವರ ತಂದೆ ಅವರನ್ನು ಉಳಿಸಲು ಪ್ರಯತ್ನ ನಡೆಸಿದ್ದನ್ನು ಒಪ್ಪದ ಭಗತ್ ಸಿಂಗ್ ನಗು ನಗುತ್ತಾ ಗಲ್ಲು ಕಂಬ ಏರಿದ ಧೀರರಾಗಿದ್ದಾರೆ. ಇಂತಹ ಮಹಾನ್ ಕ್ರಾಂತಿಕಾರಿಯ ಜೀವನ ಮತ್ತು ಹೋರಾಟ ನಮ್ಮ ಯುವಜನತೆಗೆ ಮಾದರಿಯಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ಮಧುಸೂದನ್ ರೆಡ್ಡಿ, ಹಿರಿಯ ಉಪನ್ಯಾಸಕ ನರಸರೆಡ್ಡಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...