ಶಾಹಪುರ ತಾಲೂಕಿನ ಸಾವೂರ ಗ್ರಾಮದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತಾಲೂಕಿನ ಕೊಂಗಂಡಿ ಗ್ರಾಮದ ನಿವಾಸಿ ಪರಶುರಾಮ (32) ಎಂದು ಗುರುತಿಸಲಾಗಿದೆ. ಅವರು ಸಾವೂರ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಅವರ ಒಂದು ಕೈ ಮುರಿದಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆಯ ಮಾಹಿತಿ ತಿಳಿದು ಶಾಹಪುರ್ ಪೊಲೀಸ್ ಠಾಣೆ ಪಿಎಸ್‌ಐ ಎಸ್ ಎಂ ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿದ್ದೀರಾ? ಕಲಬುರಗಿ : ಕುಡಿದ ಮತ್ತಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.





