ಯಾದಗಿರಿ | ತಲವಾರದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ; ಯುವಕನ ವಿರುದ್ಧ ಪ್ರಕರಣ ದಾಖಲು

Date:

ತಲವಾರದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ ಮಾಡಿಕೊಂಡು ಅದರ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಹಿನ್ನೆಲೆ ಸುರಪುರ ತಾಲೂಕಿನ ಕೊಡೆಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ಅಲಾಯಿ ಪೀರಾಗಳನ್ನು ಸ್ಥಾಪಿಸಿರುವ ಮಸೀದಿಯ ಸಮೀಪ ಬುಧವಾರ (ಮಾ.4) ಮುನ್ನಾ ಮಹ್ಮದ್ ದಖನಿ ಎಂಬಾತ ದೊಡ್ಡ ತಲವಾರವನ್ನು ಬಳಸಿ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಆಚರಣೆಯ ವಿಡಿಯೋವನ್ನು ಆತ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಬಳಿಕ ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಸಾರ್ವಜನಿಕ ಸ್ಥಳದಲ್ಲಿ ಆಯುಧ ಪ್ರದರ್ಶನ ಮಾಡಿರುವುದು ಹಾಗೂ ಘಟನೆ ಸಮುದಾಯಗಳ ನಡುವೆ ದ್ವೇಷ ಭಾವನೆ ಮತ್ತು ವೈಮನಸ್ಸಿಗೆ ಕಾರಣವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡೆಕಲ್ ಪೊಲೀಸ್ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಡಾ.ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಅಡ್ಡಿ: ಶಾಸಕರ ವಿರುದ್ಧ ಬಹುಜನ ಸಮಾಜ ಪಕ್ಷ ಆಕ್ರೋಶ

ಈ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...