ಯಾದಗಿರಿ | ಶೇಂಗಾ ಪ್ರತಿ ಕ್ವಿಂಟಾಲ್‌ಗೆ ₹12 ಸಾವಿರ ದರ ನಿಗದಿ ಪಡಿಸುವಂತೆ ಆಗ್ರಹಿಸಿ ರೈತರ ಧರಣಿ

Date:

ಶೇಂಗಾ ಬೆಳೆ ಬೆಲೆ ದಿಢೀರ್ ಕುಸಿತಗೊಂಡಿರುವುದನ್ನು ಖಂಡಿಸಿ ಹಾಗೂ ಪ್ರತಿ ಕ್ವಿಂಟಾಲ್‌ಗೆ ₹12 ಸಾವಿರ ದರ ನಿಗದಿ ಮಾಡಿ ಖರೀದಿ ಮಾಡುವಂತೆ ಆಗ್ರಹಿಸಿ ರೈತ ಮುಖಂಡರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ನಗರದ ಎಪಿಎಂಸಿ ಮಾರುಕಟ್ಟೆ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸಂಘದ ಮುಖಂಡರು ಮಾತನಾಡಿ, ‘ನಮ್ಮ ಭಾಗದ ರೈತರು ನಿರಂತರ ಹಸಿಬರ ಹಾಗೂ ಒಣಬರ ನಡುವೆಯೂ ಸಂಕಷ್ಟದಲ್ಲಿ ಕೃಷಿ ನಡೆಸುತ್ತಿದ್ದಾರೆ. ಉತ್ತಮವಾಗಿ ಬೆಳೆದ ಶೇಂಗಾ ಬೆಳೆ ಕೈಗೆ ಬಂದ ತಕ್ಷಣವೇ ಬೆಲೆ ಕುಸಿತ ಕಂಡಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1430528

‘ಶೇಂಗಾ ಬೆಳೆ ಬೆಳೆದ ಸಂದರ್ಭದಲ್ಲಿ ಕ್ವಿಂಟಾಲ್‌ಗೆ ಸುಮಾರು ₹12 ಸಾವಿರ ಇದ್ದ ಬೆಲೆ ಇದೀಗ ₹5 ಸಾವಿರದಿಂದ ₹6 ಸಾವಿರಕ್ಕೆ ಇಳಿದಿದೆ. ಸಾಲ-ಸೋಲು ಮಾಡಿಕೊಂಡು ಬೆಳೆದ ಬೆಳೆಗೆ ಸಮರ್ಪಕ ಬೆಲೆ ಸಿಗದೇ ರೈತರು ದಿಕ್ಕುತೋಚದ ಸ್ಥಿತಿಗೆ ತಲುಪಿದ್ದಾರೆ,’ ಎಂದು ಹೇಳಿದರು.

‘ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶೇಂಗಾ ಬೆಳೆಕ್ಕೆ ಕನಿಷ್ಠ ₹12 ಸಾವಿರ ಬೆಲೆ ನಿಗದಿ ಮಾಡಿ ಖರೀದಿ ಕೇಂದ್ರಗಳ ಮೂಲಕ ಖರೀದಿ ನಡೆಸಬೇಕು. ಮಾರುಕಟ್ಟೆಗೆ ರೈತರು ತರುವ ಉತ್ಪನ್ನಕ್ಕೆ ಕಮಿಷನ್, ಸೂಟ್ ಅಥವಾ ಹಮಾಲಿ ಶುಲ್ಕ ಹೆಸರಿನಲ್ಲಿ ಕಡಿತ ಮಾಡದಂತೆ ವರ್ತಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.

1430521

‘ಹೊರ ಜಿಲ್ಲೆಯ ಖರೀದಿದಾರರು ಬಂದಾಗ ಸ್ಥಳೀಯ ವರ್ತಕರು ಅಡ್ಡಿಪಡಿಸದೆ ಖರೀದಿಗೆ ಅವಕಾಶ ಕಲ್ಪಿಸಬೇಕು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ’ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ಅಮಾನತು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ ಭರತ, ರಾಜ್ಯ ಕಾರ್ಯದರ್ಶಿ ಮಹೇಶಗೌಡ ಎಂ. ಸುಬೇದಾರ, ರಾಜ್ಯ ಉಪಾಧ್ಯಕ್ಷ ಶಾಂತವೀರಪ್ಪ ಗೌಡ ಪೋಪಾ, ಹಣಮೇಗೌಡ ಬೀರನಕಲ್, ರಾಕೇಶ್ ಗೌಡ ಪಾಟೀಲ್, ರಾಮನಾಥ ರೆಡ್ಡಿ, ಮಹಾಂತಗೌಡ ಮದ್ದರಕಿ, ವೀರೇಶ ಕಡಬೂರ, ವೆಂಕಟೇಶ ಬೋರಬಂಡಾ, ರಮೇಶ್ ಗಾಂಜಿ, ಗುರುರಾಜ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...