ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬಸವರಾಜ (55) ಹಾಗೂ ಚಂದಪ್ಪ (38) ಎಂದು ಗುರುತಿಸಲಾಗಿದೆ. ಇಬ್ಬರೂ ಗೋಗಿ ಗ್ರಾಮದ ನಿವಾಸಿಗಳಾಗಿದ್ದು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತುಂಬಿಗಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಭಸವಾಗಿ ಬಂದ ಕ್ರೂಸರ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ರಸ್ತೆ ಬದಿಯಲ್ಲಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿವೆ.
ಇದನ್ನು ಓದಿದ್ದೀರಾ? ಯಾದಗಿರಿ | ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲು
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ತಿಳಿದ ಕೆಂಭಾವಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





