ಯಾದಗಿರಿ | ಸರ್ವೋದಯ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ

Date:

ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಶಹಾಪುರ್ ತಾಲೂಕಿನ ಕನ್ಯೆಕೋಳೂರ ಸರ್ಕಾರಿ ಕಿರಿಯ ಪ್ರಾಥಮಿಕ ಅಂಬೇಡ್ಕರ್ ಶಾಲೆಯಲ್ಲಿ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಅಧ್ಯಕ್ಷ ಪ್ರಭಾಕರ ಹೊಸ್ಮನಿ ಅವರು ಮಾತನಾಡಿ, ‘ಸರ್ವೋದಯ ಟ್ರಸ್ಟ್ ಅನ್ನು 20 ಅಕ್ಟೋಬರ್ 2016ರಂದು ಸ್ಥಾಪಿಸಲಾಗಿದ್ದು, ಮಹಿಳಾ ಸಂಘಗಳ ರಚನೆ, ಬಾಲಕಾರ್ಮಿಕತೆ ತಡೆ, ಬಾಲ್ಯವಿವಾಹ ನಿರ್ಮೂಲನೆ, ಗ್ರಾಹಕರಿಗೆ ಮಾಪನ ಕುರಿತ ಅರಿವು ಮೂಡಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ’ ಎಂದು ತಿಳಿಸಿದರು.

1005277

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಲ್ಲಿಕಾರ್ಜುನ ಸಜ್ಜನ ಅವರು ಮಾತನಾಡಿ, ‘ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಟ್ರಸ್ಟ್‌ಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಮಕ್ಕಳ ಪಾಲಕರು ಹಾಗೂ ಗ್ರಾಮಸ್ಥರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಇನ್ನಷ್ಟು ಉತ್ತಮವಾಗುತ್ತದೆ. ಟ್ರಸ್ಟ್ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ’ ಎಂದು ಶುಭಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಶ್ರೀಮತಿ ಜ್ಯೋತಿ ಮಹಾಮನಿ, ಅಂಗನವಾಡಿ ಶಿಕ್ಷಕಿ ಲಲಿತಾ ರಸ್ತಾಪುರ, ಹಣಕಾಸು ಅಧಿಕಾರಿ ನಾಗರಾಜ ದೊಡ್ಮನಿ, ಮರೆಮ್ಮ ಗೊನಾಲ್, ರೇಣುಕಾ ಆರಬೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಾಲೆಯ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮಕ್ಕೆ ನಾಗರಾಜ ದೊಡ್ಮನಿ ಅವರು ಸ್ವಾಗತಿಸಿ, ಲಕ್ಷ್ಮಿ ಬಡಿಗೇರ್ ಅವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...