ಯಾದಗಿರಿ | ಹಾಳಾದ ಸಿಸಿ ಕ್ಯಾಮೆರಾ; ವಾಹನ ಸಂಚಾರ ಅಸ್ತವ್ಯಸ್ತ

Date:

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಸಿಸಿ ಕ್ಯಾಮೆರಾಗಳು ಇದ್ದರೂ ಇಲ್ಲದಂತಾಗಿದ್ದು, ವಾಹನಗಳ ಅಡ್ಡಾದಿಡ್ಡಿ ಓಡಾಟದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಸಿಸಿ ಕ್ಯಾಮೆರಾ ದುರಸ್ಥಿಪಡಿಸಿ ಸಾರ್ವಜನಿಕರಿಗೆ ಪಾದಾಚಾರಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ದಸಂಸ ಸಂಘಟನೆ ಜಿಲ್ಲಾ ಸಂಚಾಲಕ ಶರಣರೆಡ್ಡಿ ಹತ್ತಿಗೂಡುರ್‌ ಆಗ್ರಹಸಿದರು.

ಪತ್ರಿಕೆ ಪ್ರಕಟಣೆಗೆ ತಿಳಿಸಿದ್ದು, “ಅಧಿಕಾರಿಗಳಿಗೆ ಗೊತ್ತಿದ್ದರೂ, ಕಣ್ಣಿದ್ದು ಕುರುಡರಂತೆ ಮೂಕ ಪ್ರೇಕ್ಷಕರಾಗಿದ್ದಾರೆ. ಸುಗಮ ಸಂಚಾರ ಕಲ್ಪಿಸುವತ್ತ ಜಿಲ್ಲಾಡಳಿತ, ತಾಲೂಕು ಆಡಳಿತ ಅಧಿಕಾರಿ, ಜನಪ್ರತಿನಿಧಿಗಳಿಗೆ ಒತ್ತಾಯಿಸಿದರು.

“ತಾಲೂಕಿನ ಬಸವೇಶ್ವರ ವೃತ್ತದಲ್ಲಿ ಸಿಸಿ ಕ್ಯಾಮೆರಾಗಳು ಕೆಟ್ಟು ಹೋಗಿ ಬಹಳ ವರ್ಷಗಳಾದರು ತಾಲೂಕು ಆಡಳಿತ ಅವುಗಳನ್ನು ರಿಪೇರಿ ಮಾಡಿಸುವ ಗೋಜಿಗೆ ಹೋಗಿಲ್ಲ. ಶಹಾಪುರ ತಾಲೂಕಿನ ಸುಮಾರು 180 ಹಳ್ಳಿ ಜನರು ಗ್ರಾಮೀಣ ಪ್ರದೇಶದಿಂದ ಒಂದಲ್ಲ ಒಂದು ರೀತಿ ಕೆಲಸ ಕಾರ್ಯಗಳಿಗೆ ತಾಲೂಕು ಪಟ್ಟಣಕ್ಕೆ ಹೋಗಿಬರುವುದು ಸಾಮಾನ್ಯವಾಗಿದೆ. ದಿನನಿತ್ಯ ಹಳ್ಳಿಯಿಂದ ಶಹಾಪುರ ತಾಲೂಕಿಗೆ ಸುಮಾರು ನಾಲ್ಕರಿಂದ ಐದು ಸಾವಿರ ಜನರು ಬಂದು ಹೋಗುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವೇಶ್ವರ ವೃತ್ತದಲ್ಲಿ ಶಹಾಪುರ ನಗರದ ಹೆಬ್ಬಾಗಿಲಾಗಿದ್ದು, ಈ ಪ್ರದೇಶದಲ್ಲಿ ನಿತ್ಯವೂ ಹೆಚ್ಚಿನ ಜನರು ಓಡಾಡುವ ಪ್ರದೇಶವಾಗಿದ್ದು, ಇಂಥ ಪ್ರದೇಶದಲ್ಲಿ ಕಾಟಾಚಾರಕ್ಕಾಗಿ ಸಿಸಿ ಕ್ಯಾಮೆರಾ ಅಳವಡಿಸಿ ಅಧಿಕಾರಿ ವರ್ಗ ಕೈತೊಳೆದುಕೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ಈ ವೃತ್ತದಿಂದ ಯಾದಗಿರಿ, ಹೈದರಾಬಾದ್, ರಾಯಚೂರು, ಕಲಬುರಗಿ, ಸೊಲ್ಲಾಪುರ್, ಪೂನಾ, ಬಾಂಬೆಗೆ ಹೋಗುವ ಜನರಿಗೆ ಬಸವೇಶ್ವರ ವೃತ್ತ ಕೇಂದ್ರಬಿಂದುವಾಗಿದೆ. ಇನ್ನು ಈ ರಸ್ತೆ ಮಾರ್ಗದಿಂದಲೇ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಸಂಚರಿಸುತ್ತಿದ್ದಾರೆ. ಆದರೆ, ಸಿಸಿ ಕ್ಯಾಮೆರಾ ರಿಪೇರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಯಾವೊಬ್ಬ ಜನಪ್ರತಿನಿಧಿಯೂ ಅಧಿಕಾರಿಗಳಿಗೆ ತಿಳಿಸಿಲ್ಲ” ಎಂದು ಆರೋಪಿಸಿದರು.

“ವಾಹನಗಳ ಅಡ್ಡಾದಿಡ್ಡಿ ಓಡಾಟದಿಂದ ಸಾರ್ವಜನಿಕರಿಗೆ ಪಾದಾಚಾರಿಗಳಿಗೆ ಹೆಚ್ಚಿನ ಅಪಘಾತಗಳಾಗುವ ಸಾಧ್ಯತೆಯಿದೆ. ಇನ್ನು ರಾತ್ರಿ ಸಮಯದಲ್ಲಂತೂ ಮಿತಿಮೀರಿದ ವಾಹನಗಳ ಸಂಚಾರ ಹಾಗೂ ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಸಂಭವಿಸುತ್ತಿವೆ. ಪೊಲೀಸ್ ಇಲಾಖೆ ಅವುಗಳನ್ನು‌ ಹೇಗೆ ಕಂಡುಹಿಡಿಯುತ್ತದೆ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇನ್ನು ರಾತ್ರಿಯಲ್ಲಿ ಕಳ್ಳರು, ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದ್ದು, ಅವರಿಗೆ ಭಯವೇ ಇಲ್ಲದಂತಾಗಿದೆ. ಇದರಿಂದ ದಿನದಿಂದ ದಿನಕ್ಕೆ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಅಕಾಲಿಕ ಮಳೆ; ಅಡಕೆ ಎಲೆಚುಕ್ಕಿ ರೋಗ ಉಲ್ಬಣ

“ಇಂತಹ ಅಕ್ರಮಗಳನ್ನು ಮಟ್ಟ ಹಾಕಲು ಕೂಡಲೇ ಸಿಸಿ ಕ್ಯಾಮೆರಾ ರಿಪೇರಿ ಮಾಡಿ ಕಾನೂನು ಸುವ್ಯಸ್ಥೆ ಕಾಪಾಡಬೇಕು. ಸಾರ್ವಜನಿಕರ ಹಿತಕ್ಕಾಗಿ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈಗಲಾದರೂ ಕ್ರಮಕ್ಕೆ ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ” ಎಂದು ತಿಳಿಸಿದ್ದಾರೆ.

ವರದಿ :ಶರಣರೆಡ್ಡಿ ಹತ್ತಿಗೂಡುರ್ ದಸಂಸ ಜಿಲ್ಲಾ ಸಂಚಾಲಕ, ಯಾದಗಿರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...