ಯಾದಗಿರಿ | ಮರ್ಯಾದೆ ಹತ್ಯೆ ಖಂಡಿಸಿ ದಸಂಸ ಪ್ರತಿಭಟನೆ

Date:

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಯ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ರಾಜ್ಯ ಸಮಿತಿ ವತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಆರೋಪಿ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಇತರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ದಲಿತ ಯುವಕ ವಿವೇಕಾನಂದನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಮತ್ತು 4 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಹಿಳೆಯನ್ನು ಮರ್ಯಾದೆ ಹತ್ಯೆ ಹೆಸರಿನಲ್ಲಿ ಕೊಲೆ ಮಾಡಿರುವುದು ಅತ್ಯಂತ ಕ್ರೂರ ಹಾಗೂ ಅಮಾನವೀಯ ಕೃತ್ಯವಾಗಿದೆ ಎಂದು ತೀವ್ರವಾಗಿ ಖಂಡಿಸಿದರು. ಇಂತಹ ಘಟನೆಗಳು ಸಮಾಜದ ಮಾನವೀಯ ಮೌಲ್ಯಗಳಿಗೆ ಧಕ್ಕೆ ತರುವಂತವುಗಳಾಗಿದ್ದು, ಬಸವಣ್ಣನ ಭೂಮಿಯಲ್ಲಿ ಇವು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ ಶಾಲೆ ಉಳಿಸಲು ಇಟಗಾ ಕೆ ಗ್ರಾಮದಲ್ಲಿ ಪೋಷಕರ ಬೃಹತ್ ಪ್ರತಿಭಟನೆ

‘ಈ ಪ್ರಕರಣಕ್ಕೆ ಕಾರಣರಾದ ಪ್ರಕಾಶಗೌಡ ಪಾಟೀಲ್, ಪ್ರೀತಮಗೌಡ ಪಾಟೀಲ್, ಅರುಣಗೌಡ ಪಾಟೀಲ್, ಈರಪ್ಪ ಹಾಗೂ ಮುದಕಪ್ಪ ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಮರ್ಯಾದೆ ಹತ್ಯೆಗಳನ್ನು ತಡೆಯಲು ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಮತ್ತು ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಜೀಜಸಾಬ್ ಐಕೂರ್, ಮಹಾದೇವಪ್ಪ ಬಿಜಾಸಪೂರ, ಮಾನಪ್ಪ ಬಿಜಾಪೂರ, ಬಸವರಾಜ ಗೋನಾಲ, ದೇವಪ್ಪ ಗುಡ್ಡೆರ್, ಚಂದ್ರಕಾಂತ ಹಂಪಿನ್, ಮಲ್ಲಪ್ಪ ಉರುಸುಲ್, ನಿಂಗಪ್ಪ ಹಂಪಿನ್, ಉಮೇಶ್ ಲಿಂಗೇರಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...