ಯಾದಗಿರಿ | ಜಾತಿ ನಿಂದನೆ ಪ್ರಕರಣದ ಆರೋಪಿ ಬಂಧನಕ್ಕೆ ವಿಳಂಬ : ಮಹಿಪಾಲ್ ಆರೋಪ

Date:

ಗುರುಮಿಠಕಲ್ ತಾಲೂಕಿನ ಯಾನಗುಂದಿ ಗ್ರಾಮದಲ್ಲಿ ನಡೆದ ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯನ್ನು ಇದುವರೆಗೂ ಬಂಧಿಸದೇ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾದಿಗ ಸಮಾಜದ ಮುಖಂಡ ಮಹಿಪಾಲ್ ದೊಡ್ಮನಿ ಆರೋಪಿಸಿದ್ದಾರೆ

ಯಾದಗುಂದಿ ಗ್ರಾಮದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼ 2025ರ ಡಿ.31ರಂದು ಯಾನಗುಂದಿ ಗ್ರಾಮದಲ್ಲಿ ನಡೆದ ವೈಯಕ್ತಿಕ ಜಗಳದ ಸಂದರ್ಭದಲ್ಲಿ ರೆಡ್ಡಿ ಸಮಾಜದ ವ್ಯಕ್ತಿ ಮಾಣಿಕ ರೆಡ್ಡಿ, ಜಗನ್ನಾಥ ರೆಡ್ಡಿ ಅವರು ಮಾದಿಗ ಸಮಾಜದ ವ್ಯಕ್ತಿ ಮಹಿಪಾಲ್ ಬಾಲಪ್ಪ ದೊಡ್ಮನೆ ಅವರ ಹೆಸರನ್ನು ಉಲ್ಲೇಖಿಸಿ, ಮಾದಿಗ ಜಾತಿಯ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತುʼ ಎಂದು ವಿವರಿಸಿದರು.

ಈ ಘಟನೆಗೆ ಸಂಬಂಧಿಸಿ ಸೇಡಂ ತಾಲೂಕಿನ ಮಾದಿಗ ಸಮಾಜದ ಮುಖಂಡ ಮಾರುತಿ ಮುಗುಟಿ ಅವರು ಮುಧೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದಲ್ಲಿ ಜನವರಿ 4, 2026ರಂದು ಪ್ರಕರಣ ದಾಖಲಿಸಲಾಗಿದೆ. ಆದರೆ, ಪ್ರಕರಣ ದಾಖಲಾಗಿದ್ದರೂ ಇದುವರೆಗೂ ಆರೋಪಿಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲʼ ಎಂದು ಮಹಿಪಾಲ್ ದೊಡ್ಮನೆ ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಪೊಲೀಸ್ ಅಧಿಕಾರಿಗಳು ಹಣ ಪಡೆದು ಪ್ರಕರಣವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ ಎಂದು ಅವರು ಆರೋಪಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಾಮರ್ಥ್ಯ ಬಲವರ್ಧನೆ, ಪಂಚಾಯತ್ ರಾಜ್ ಕಾಯ್ದೆ ಕುರಿತು ತರಬೇತಿ

ʼಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಮುಂದುವರಿದಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಮುಖಂಡ ಸಾಬಪ್ಪ ಅಬಗಲ್, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...