ಯಾದಗಿರಿ | ಊರಿಗೆ ತೆರಳಲು ವಾಹನ ಸಿಕ್ಕಿಲ್ಲವೆಂದು ಸಾರಿಗೆ ಬಸ್ ಕದ್ದೊಯ್ದ ಚಾಲಕ!

Date:

ಊರಿಗೆ ಹೋಗಲು ವಾಹನ ಸಿಗದಿದ್ದಕ್ಕೆ ಸೇವೆಯಿಂದ ವಜಾಗೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್‌ ನಿಲ್ದಾಣದಿಂದ ತನ್ನೂರಿಗೆ ಬಸ್ ಕದ್ದೊಯ್ದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ.

ಮಾ.19ರಂದು‌ ಕಾರ್ಯಾಚರಣೆ ನಡೆಸಿ ಸೈದಾಪುರ ಬಸ್ ನಿಲ್ದಾಣದಲ್ಲಿ‌ ಕೆಂಪು ಬಸ್ ನಿಲ್ಲಿಸಲಾಗಿತ್ತು. ಚಾಲಕ ಮತ್ತು ನಿರ್ವಾಹಕ ಬಸ್‌ನಲ್ಲಿ ಇರಲಿಲ್ಲ. ಅದೇ ವೇಳೆ ನಿಲ್ದಾಣಕ್ಕೆ ಬಂದ ಚಾಲಕ ಮಹಿಪಾಲರೆಡ್ಡಿ ಎಂಬಾತ ಸಾರಿಗೆ ಬಸ್‌ನ್ನು ಸ್ವಗ್ರಾಮ ರಾಚನಳ್ಳಿಗೆ ತೆಗೆದುಕೊಂಡು ಹೋಗಿದ್ದಾನೆ.

ಬಸ್‌ ಕದೊಯ್ದ ಘಟನೆಯ ಸಿಸಿಟಿವಿ ದೃಶ್ಯಗಳು ಇದೀಗ ಬಯಲಾಗಿವೆ. ಕೆಕೆಆರ್​ಟಿಸಿಗೆ ಸೇರಿದ ಬಸ್‌ ಅನ್ನು ಅದೇ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದ ಮಹಿಪಾಲರೆಡ್ಡಿ ಕದ್ದೊಯ್ದಿದ್ದಾರೆ ಎಂಬುದು ತಿಳಿದು ಬಂದಿದೆ. ಹಲವು ದೂರು, ಕರ್ತವ್ಯ ಲೋಪದ ಹಿನ್ನಲೆ ಮಹಿಪಾಲರೆಡ್ಡಿಯನ್ನು ಕೆಲವು ದಿನಗಳ ಹಿಂದೆ ವಜಾಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಗ್ರಾಮ ರಾಚನಳ್ಳಿಗೆ ತೆರಳಲು ಯಾವುದೇ ವಾಹನ ಸಿಗದಿದ್ದರಿಂದ ಈ ಕೃತ್ಯ ಎಸಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಬಳಿಕ ಪ್ರಕರಣ ಬೆಳಕಿಗೆ ಬಂದಂತೆ ಪೊಲೀಸರು ತನಿಖೆ ನಡೆಸಿ ಬಸ್‌ ಅನ್ನು ವಾಪಸ್ ಪಡೆದಿದ್ದಾರೆ.

ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದನ್ನೂ ಓದಿ : ಕುಡಿಯುವ ನೀರಿನ ಅಭಾವ : ಸಮರೋಪಾದಿಯಲ್ಲಿ ತಯಾರಿ ನಡೆಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಯಾದಗಿರಿ | ಕ್ರೂಸರ್ ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್...